
ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ
ಬೆಂಗಳೂರು: ರಿಯಾಲಿಟಿ ಶೋ ಬಿಗ್ ಬಾಸ್ 9 ರ ವಿಜೇತ ಘೋಷಣೆಯಾಗಿದ್ದು, ಬಿಗ್ ಬಾಸ್ ವಿಜೇತನ ಕಿರೀಟ ನಟ ರೂಪೇಶ್ ಶೆಟ್ಟಿ ಮುಡಿಗೇರಿದೆ.
ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ಹೆಸರು ಮಾಡಿದ್ದರು. ರೂಪೇಶ್ ಶೆಟ್ಟಿ ವಿಜೇತರಾಗಿದ್ದರೆ, ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 9: ಫೈನಲಿಸ್ಟ್ ಹೆಸರು ಘೋಷಿಸಿದ ಕಿಚ್ಚ ಸುದೀಪ್!
ರೂಪೇಶ್ ಶೆಟ್ಟಿ ಒಟಿಟಿ ಮೂಲಕ ಬಿಗ್ ಬಾಸ್ ಸ್ಪರ್ಧಿಯಾಗಿ ಆಯ್ಕೆಯಾಗಿ ಮುಖ್ಯ ರಿಯಾಲಿಟಿ ಶೋ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಉಳಿದ ಎಲ್ಲಾ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು. ಒಟಿಟಿಯಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು.
ಬಿಗ್ ಬಾಸ್ ಟೈಟಲ್ ಗೆದ್ದಿರುವ ರೂಪೇಶ್ ಶೆಟ್ಟಿಗೆ 60 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ.