ಮಲಯಾಳಂ ಚಲನಚಿತ್ರ ಕಲಾವಿದರ ಸಂಘಕ್ಕೆ ನೋಟಿಸ್ ಜಾರಿ ಮಾಡಿದ ಜಿಎಸ್‌ಟಿ ಇಲಾಖೆ

ತಕ್ಷಣವೇ 4.36 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಕೋರಿ ಜಿಎಸ್‌ಟಿ ಇಲಾಖೆಯು ಮಲಯಾಳಂ ಚಲನಚಿತ್ರ ಕಲಾವಿದರ ಸಂಘಕ್ಕೆ (ಅಮ್ಮ) ನೋಟೀಸ್ ಜಾರಿ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಚ್ಚಿ: ತಕ್ಷಣವೇ 4.36 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಕೋರಿ ಜಿಎಸ್‌ಟಿ ಇಲಾಖೆಯು ಮಲಯಾಳಂ ಚಲನಚಿತ್ರ ಕಲಾವಿದರ ಸಂಘಕ್ಕೆ (ಅಮ್ಮ) ನೋಟೀಸ್ ಜಾರಿ ಮಾಡಿದೆ.

ಈ ಸಂಬಂಧ ಕಳೆದ ವರ್ಷ ಮೊದಲ ನೋಟಿಸ್ ನೀಡಲಾಗಿದ್ದು, 45 ಲಕ್ಷ ರೂ.ಗಳನ್ನು ಪಾವತಿಸಬೇಕಿತ್ತು.
ಚಾರಿಟಬಲ್ ಸೊಸೈಟಿ ಕಾಯ್ದೆಯಡಿ ನೋಂದಣಿಯಾಗಿರುವುದರಿಂದ ಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು ಎಂಬ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಹೇಳಿಕೆಯನ್ನು ತೆರಿಗೆ ಇಲಾಖೆ ತಿರಸ್ಕರಿಸಿದೆ.

ವೇದಿಕೆ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಂಘಕ್ಕೆ ಗಮನಾರ್ಹ ಆದಾಯ ಬರುತ್ತದೆ ಮತ್ತು ಹೆಚ್ಚಿನ ಆದಾಯವನ್ನು ಸಕ್ರಿಯವಾಗಿರದ ಅದರ ಸದಸ್ಯರಿಗೆ ಮಾಸಿಕ ಪಿಂಚಣಿ ನೀಡಲು ಬಳಸಲಾಗುತ್ತಿದೆ.

ಮೂಲಗಳ ಪ್ರಕಾರ, ಜಿಎಸ್‌ಟಿ ಇಲಾಖೆಯು ಅಮ್ಮ ಅಧಿಕಾರಿಗಳನ್ನು ಸಂಪರ್ಕಿಸಲಿದೆ ಮತ್ತು ಬಾಕಿ ಪಾವತಿಗೆ 30 ದಿನಗಳ ಕಾಲಾವಕಾಶವನ್ನು ನೀಡುತ್ತದೆ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com