ಪುಷ್ಪ -2 ಸಿನಿಮಾದಿಂದ ರಶ್ಮಿಕಾ ಮಂದಣ್ಣ ಔಟ್: ಈ ಬಗ್ಗೆ 'ಕಿರಿಕ್' ಬೆಡಗಿ ಹೇಳಿದ್ದೇನು?
ಇಂಡಿಯಾ ಟುಡೇ ಜೊತೆ ಮಾತಾನಾಡಿರುವ ಅವರು ʼಮುಂದಿನ ತಿಂಗಳು ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದೇನೆ. ಪುಷ್ಪ-2 ನಲ್ಲಿ ಏನೆಲ್ಲಾ ಇದೆ ಎನ್ನುವುದನ್ನು ನೋಡಲು ತುಂಬಾ ಉತ್ಸುಕಳಾಗಿದ್ದೇನೆ ಎಂದಿದ್ದಾರೆ.
Published: 16th January 2023 04:53 PM | Last Updated: 16th January 2023 05:23 PM | A+A A-

ರಶ್ನಿಕಾ ಮಂದಣ್ಣ
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ವರ್ಷದ ಆರಂಭದಲ್ಲೇ 'ವಾರಿಸುʼ ಮೂಲಕ ಬ್ರೇಕ್ ಪಡೆದುಕೊಂಡಿದ್ದಾರೆ. ಸದ್ಯ ಸಿದ್ದಾರ್ಥ್ ಮಲ್ಹೋತ್ರ ಅವರೊಂದಿಗೆ ನಟಿಸಿರುವ ' ಮಿಷನ್ ಮಜ್ನುʼ ಸಿನಿಮಾದ ಪ್ರಚಾರದಲ್ಲಿ ರಶ್ಮಿಕಾ ಬ್ಯುಸಿಯಾಗಿದ್ದಾರೆ.
ಜ.20 ರಂದು ನೆಟ್ ಫ್ಲಿಕ್ಸ್ ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಟಾಲಿವುಡ್ ನ ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುಷ್ಪ ಪಾರ್ಟ್ -1 ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಹಿಟ್ ಆಗಿತ್ತು. ಶ್ರೀವಲ್ಲಿಯಾಗಿ ರಶ್ಮಿಕಾ ಪ್ರೇಕ್ಷಕರ ಮನ ಗೆದ್ದಿದ್ದರು. ಸುಕುಮಾರ್ ಅವರ ʼಪುಷ್ಪ-2ʼ ಸಿನಿಮಾ ಬಹು ನಿರೀಕ್ಷೆಯನ್ನು ಹುಟ್ಟಿಸಿದೆ.
ಈಗಾಗಲೇ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ಇತ್ತೀಚೆಗೆ ಪುಷ್ಪ ಸೀಕ್ವೆಲ್ ನಿಂದ ರಶ್ಮಿಕಾ ಮಂದಣ್ಣ ಅವರನ್ನು ತೆಗೆದಯ ಹಾಕಲಾಗಿದೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಸಾಯಿ ಪಲ್ಲವಿ ರಶ್ಮಿಕಾ ಜಾಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು.
ಇದನ್ನೂ ಓದಿ: 'ನೀನು ಎಷ್ಟೇ ಬಕೆಟ್ ಹಿಡಿದ್ರೂ....': ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್!
ಆದರೆ ಈ ಎಲ್ಲದಕ್ಕೂ ರಶ್ಮಿಕಾ ಅವರು ಒಂದೇ ಮಾತಿನಲ್ಲಿ ಉತ್ತರಿಸಿದ್ದಾರೆ. ಇಂಡಿಯಾ ಟುಡೇ ಜೊತೆ ಮಾತಾನಾಡಿರುವ ಅವರು ʼಮುಂದಿನ ತಿಂಗಳು ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದೇನೆ. ಪುಷ್ಪ-2 ನಲ್ಲಿ ಏನೆಲ್ಲಾ ಇದೆ ಎನ್ನುವುದನ್ನು ನೋಡಲು ತುಂಬಾ ಉತ್ಸುಕಳಾಗಿದ್ದೇನೆ ಎಂದಿದ್ದಾರೆ.