ಶಾಕುಂತಲಂ ಚಿತ್ರದ ಸ್ಟಿಲ್.
ಶಾಕುಂತಲಂ ಚಿತ್ರದ ಸ್ಟಿಲ್.

ಸಮಂತಾ ನಟನೆಯ 'ಶಾಕುಂತಲಂ' ಚಿತ್ರದ 'ಮಲ್ಲಿಕಾ ಮಲ್ಲಿಕಾ...' ಹಾಡು ಬಿಡುಗಡೆ

ನಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆ ಇರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸಿದ್ದು, ಬುಧವಾರ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ.
Published on

ನಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆ ಇರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸಿದ್ದು, ಬುಧವಾರ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಮಲ್ಲಿಕಾ.. ಮಲ್ಲಿಕಾ... ಎಂಬ ಹಾಡನ್ನು ಚಿತ್ರ ತಂಡ ನಿನ್ನೆ ಬಿಡುಗಡೆ ಮಾಡಿದ್ದು, ಈ ಹಾಡನ್ನು ಮಣಿ ಶರ್ಮಾ ಸಂಯೋಜಿಸಿದ್ದಾರೆ ಮತ್ತು ರಮ್ಯಾ ಬೆಹರಾ ಹಾಡಿದ್ದಾರೆ. ಚೈತನ್ಯ ಪ್ರಸಾದ್ ಗೀತೆಯ ಸಾಹಿತ್ಯವನ್ನು ಬರೆದಿದ್ದಾರೆ.

ಮಲ್ಲಿಕಾ..ಮಲ್ಲಿಕಾ ಎನ್ನುವ ಈ ಮೆಲೋಡಿ ಹಾಡು ಕೇಳಲು ತುಂಬಾ ಇಂಪಾಗಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಾಡು ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿಯೂ ಬಿಡುಗಡೆಯಾಗಿದೆ.

ಸಮಂತಾ ಮೊದಲ ಬಾರಿಗೆ ಪೌರಾಣಿಕ ಪಾತ್ರದಲ್ಲಿ ನಟಿಸಿದ್ದು, ಸಮಂತಾ ಶಕುಂತಲೆಯಾಗಿ ನಟಿಸಿದ್ದಾರೆ. ಈ ಪೌರಾಣಿಕ ನಾಟಕದಲ್ಲಿ ದೇವ್ ಮೋಹನ್ ರಾಜು ದುಷ್ಯಂತನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರಕ್ಕೆ ಮಣಿ ಶರ್ಮಾ ಸಂಗೀತ ನೀಡಿದ್ದು, ಮೋಹನ್ ಬಾಬು, ಪ್ರಕಾಶ್ ರಾಜ್, ಗೌತಮಿ, ಅದಿತಿ ಬಾಲನ್ ಮತ್ತು ಅನನ್ಯ ನಾಗೆಲ್ಲ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಮಹತ್ವಾಕಾಂಕ್ಷೆಯ ಚಿತ್ರವನ್ನು ಗುಣಶೇಖರ್ ನಿರ್ದೇಶಿಸಿದ್ದು, ನೀಲಿಮಾ ಗುಣ ಮತ್ತು ದಿಲ್ ರಾಜು ಜಂಟಿಯಾಗಿ ನಿರ್ಮಿಸಿದ್ದಾರೆ. ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಈ ಸಿನಿಮಾ ಫೆಬ್ರವರಿ 17 ರಂದು ತೆರೆಗೆ ಬರಲಿದೆ. ಚಿತ್ರವು ತೆಲುಗು, ಹಿಂದಿ, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಪ್ರಪಂಚದಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಟ್ರೇಲರ್‌ಗೆ ಜನರಿಂದ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com