ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನ
ಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
Published: 29th January 2023 09:22 AM | Last Updated: 29th January 2023 09:44 AM | A+A A-

ಮಂದೀಪ್ ರಾಯ್ (ಸಂಗ್ರಹ ಚಿತ್ರ)
ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಇಂದು ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಡಿಸೆಂಬರ್ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ಡಿಸೆಂಬರ್ ತಿಂಗಳಲ್ಲಿ ಮಂದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕನ್ನಡದ ಖ್ಯಾತ ನಟರಾದ ಅನಂತ್ ನಾಗ್, ಶಂಕರ್ ನಾಗ್, ರಾಜ್ ಕುಮಾರ್, ವಿಷ್ಣುವರ್ಧನ್ ಸೇರಿ ಅನೇಕ ನಾಯಕನಟರು, ಪ್ರಮುಖ ನಟರ ಜೊತೆ ಮಂದೀಪ್ ರಾಯ್ ಇದುವರೆಗೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಮಂದೀಪ್ ರಾಯ್ ಹಾಸ್ಯ ಪಾತ್ರಗಳಲ್ಲಿ ಹೆಚ್ಚು ಮಿಂಚಿದ್ದಾರೆ. ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್ದೀಪ್ ರಾಯ್ ನಟಿಸಿದ್ದಾರೆ.