ಸಿನಿ ಸ್ಟಾರ್ಗಳಿಗೆ ಸರ್ಕಾರಿ ಜಾಗ ಯಾಕೆ? ನಟರ ಸ್ಮಾರಕಕ್ಕೆ ಹೋರಾಟಗಾರ ಚೇತನ್ ಕ್ಯಾತೆ! ವಿಷ್ಣು ಅಭಿಮಾನಿಗಳ ಆಕ್ರೋಶ
ಸದಾ ವಿವಾದದಲ್ಲೇ ಇರುವ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ವಿಷ್ಣವರ್ಧನ್ ಸ್ಮಾರಕ ವಿಚಾರದಲ್ಲಿ ಮತ್ತೆ ವಿವಾದಕ್ಕೀಡಾಗಿದ್ದಾರೆ.
Published: 31st January 2023 08:38 AM | Last Updated: 31st January 2023 05:08 PM | A+A A-

ಚೇತನ್ ಕುಮಾರ್
ಸದಾ ವಿವಾದದಲ್ಲೇ ಇರುವ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ವಿಷ್ಣವರ್ಧನ್ ಸ್ಮಾರಕ ವಿಚಾರದಲ್ಲಿ ಮತ್ತೆ ವಿವಾದಕ್ಕೀಡಾಗಿದ್ದಾರೆ. ಮೊನ್ನೆ ಲೋಕಾಪರ್ಣೆಗೊಂಡ ಡಾ.ವಿಷ್ಣು ಸ್ಮಾರಕದ ಬಗ್ಗೆಯೂ ಕ್ಯಾತೆ ತೆಗೆದಿದ್ದಾರೆ.
ಕನ್ನಡ ಚಿತ್ರರಂಗದ ಮೇರು ನಟರ ಸ್ಮಾರಕಗಳಿಗೆ ಸಂಬಂಧಪಟ್ಟಂತೆ ಈಗಾಗಲೇ ಅನೇಕ ಚರ್ಚೆ ನಡೆದಿದೆ. ಒಂದಷ್ಟು ವಿವಾದಗಳೂ ಆಗಿದ್ದುಂಟು. ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣ ಆಗಿದ್ದು, ಮೊನ್ನೆಯಷ್ಟೇ ಸಿಎಂ ಬೊಮ್ಮಾಯಿ, ಸ್ಮಾರಕವನ್ನ ಲೋಕಾರ್ಪಣೆ ಮಾಡಿದ್ದಾರೆ. ಇದು ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕ ಈಗ ಒಂದು ಆಕರ್ಷಣಿಯ ಸ್ಥಳವಾಗಿದೆ. ಅದರ ಬೆನ್ನಲ್ಲೇ ನಟ ಚೇತನ್ ಅವರು ಹೊಸ ವಾದ ಮುಂದಿಟ್ಟಿದ್ದಾರೆ.
ಚಲನಚಿತ್ರ ನಟರ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ, ಮತ್ತು ಸಂಪನ್ಮೂಲಗಳನ್ನು ಬಳಸಬಾರದು ಎಂದು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ವಿಷ್ಣುವರ್ಧನ್ ಅಭಿಮಾನಿಗಳಿಂದ ಆಕ್ರೋಶವೂ ವ್ಯಕ್ತವಾಗಿದೆ.
ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್‌ಗಳು, ಈಗಾಗಲೇ ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ. ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತುಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಉಪಯೋಗಕ್ಕೆ ಬರುತ್ತವೆ ಎಂದು ಚೇತನ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.