ಜುಲೈ 5ಕ್ಕೆ ರಾನಿ ಚಿತ್ರ ಟೀಸರ್ ರಿಲೀಸ್: ರಗಡ್ ಲುಕ್ ನಲ್ಲಿ ಕಿರಣ್ ರಾಜ್ ಮಿಂಚಿಂಗ್
ಕಿರುತೆರೆಯ ಜನಪ್ರಿಯ ಧಾರಾವಾಹಿ ಕನ್ನಡತಿ ಮೂಲಕ ಮನೆಮಾತಾಗಿರುವ ಕಿರಣ್ ರಾಜ್ ಬೆಳ್ಳಿತೆರೆಯಲ್ಲಿಯೂ ತಮ್ಮ ಛಾಪು ಮೂಡಿಸಲು ಸಜ್ಜಾಗಿದ್ದಾರೆ.
ರಾನಿ ಚಿತ್ರ ಈಗಾಗಲೇ ಟೈಟಲ್ ಹಾಗೂ ಪೋಸ್ಟರ್ ಮೂಲಕ ಪ್ರೇಕ್ಷರಲ್ಲಿ ಕುತೂಹಲ ಹುಟ್ಟಿಸಿದ್ದು, ಚಿತ್ರದ ಟೀಸರ್ ಕಿರಣ್ ರಾಜ್ ಅವರ ಹುಟ್ಟುಹಬ್ಬದ ದಿನ ಅಂದರೆ ಜು.5ಕ್ಕೆ ಬಿಡುಗಡೆಯಾಗಲಿದೆ.
ಈ ಹಿಂದೆ ಕಿರಣ್ ರಾಜ್ ದುಬೈಗೆ ಹೋದಿ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ರಾನಿ ಚಿತ್ರದ ಟೈಟಲ್ ಅನಾವರಣಗೊಳಿಸಿದ್ದರು, ಈ ಸಾಹಸಕ್ಕೆ ಇಡೀ ಚಿತ್ರರಂಗವೇ ಮೆಚ್ಚುಗೆ ವ್ಯಕ್ತಪಡಿಸಿದ್ದು. ನಂತರ ಬಿಡುಗಡೆಯಾದ ಚಿತ್ರದ ಪೋಸ್ಟರ್ ಪ್ರೇಕ್ಷಕರಲ್ಲಿ ಕುತೂಹಲವನ್ನು ಹೆಚ್ಚಿಸಿತ್ತು. ಚಿತ್ರದಲ್ಲಿ ಕಿರಣ್ ರಾಜ್ ಸಖತ್ ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.
ಸಮೀಕ್ಷಾ, ಅಪೂರ್ವ, ರಾದ್ಯಾ ಮೂವರು ಈ ಚಿತ್ರದ ನಾಯಕಿಯರಾಗಿದ್ದು, ಮೂವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸ್ಟಾರ್ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ.
ರಾಘವೇಂದ್ರ ಬಿ.ಕೋಲಾರ್ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೆಶನವಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ಚಿತ್ರದಲ್ಲಿ ರವಿ ಶಂಕರ್, ಮೈಕೋ ನಾಗರಾಜ್, ಬಿ. ಸುರೇಶ್, ಮಂಡ್ಯ ರಮೇಶ್, ಸುಜಯ್ ಶಾಸ್ತ್ರಿ, ಮತ್ತು ಧರ್ಮಣ ಕಡೂರು ಸೇರಿದಂತೆ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಡಿಸೆಂಬರ್ ತಿಂಗಳಿನಲ್ಲಿ ಚಿತ್ರ ಬಿಡುಗಡೆ ಮಾಡಲು ನಿರ್ಮಾಪಕರು ಸಿದ್ಧತೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ