ಪವಿತ್ರಾ ಲೋಕೇಶ್-ನರೇಶ್ ಕಲ್ಯಾಣ: ಇಲ್ಲಿದೆ ವಿಡಿಯೊ

ತೆಲುಗು ನಟ ನರೇಶ್ ಹಾಗೂ ಕನ್ನಡ ಮೂಲದ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸಂಬಂಧ ಮತ್ತು ಮದುವೆ ವಿಚಾರ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿಯಾಗಿತ್ತು. ಹೊಸ ವರ್ಷದ ಸಂದರ್ಭದಲ್ಲಿ ನರೇಶ್ ತಮ್ಮ ಮತ್ತು ಪವಿತ್ರರ ರೊಮ್ಯಾಂಟಿಕ್ ವಿಡಿಯೊವನ್ನು ಬಿಡುಗಡೆ ಮಾಡಿದ್ದರು. 
ನರೇಶ್-ಪವಿತ್ರಾ
ನರೇಶ್-ಪವಿತ್ರಾ

ತೆಲುಗು ನಟ ನರೇಶ್ ಹಾಗೂ ಕನ್ನಡ ಮೂಲದ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸಂಬಂಧ ಮತ್ತು ಮದುವೆ ವಿಚಾರ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿಯಾಗಿತ್ತು. ಹೊಸ ವರ್ಷದ ಸಂದರ್ಭದಲ್ಲಿ ನರೇಶ್ ತಮ್ಮ ಮತ್ತು ಪವಿತ್ರರ ರೊಮ್ಯಾಂಟಿಕ್ ವಿಡಿಯೊವನ್ನು ಬಿಡುಗಡೆ ಮಾಡಿದ್ದರು. 

ಇದೀಗ ಇಂದು ಅವರ ವಿವಾಹದ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ಮೂಲಕ ತಾವು ಅಧಿಕೃತವಾಗಿ ಸತಿ-ಪತಿಗಳಾಗಿರುವುದಾಗಿ ಹೇಳಿಕೊಂಡಿದ್ದಾರೆ. ಪವಿತ್ರಾ ಲೋಕೇಶ್ ಜೊತೆ ಸಪ್ತಪದಿ ತುಳಿದ ವಿಡಿಯೋನ ನರೇಶ್ ಹಂಚಿಕೊಂಡಿದ್ದಾರೆ. ಜೊತೆಗೆ ಆಶೀರ್ವಾದ ಮಾಡುವಂತೆ ಅವರು ಅಭಿಮಾನಿಗಳಲ್ಲಿ ಕೋರಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.ಅನೇಕರು ನವ ದಂಪತಿಗೆ ಶುಭಾಶಯ ಕೋರಿದ್ದಾರೆ.

ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ಈ ವಿಚಾರದಲ್ಲಿ ನರೇಶ್ ಪತ್ನಿ ರಮ್ಯಾ ಆಕ್ಷೇಪ ವ್ಯಕ್ತಪಡಿಸಿ ಮಾಧ್ಯಮಗಳ ಮುಂದೆ ಹಲವು ಆರೋಪಗಳನ್ನು ಮಾಡಿ ಇಬ್ಬರೂ ಕೋರ್ಟ್ ಮೆಟ್ಟಿಲೇರಿದ್ದರು. ಅನೇಕರು ನವ ದಂಪತಿಗೆ ಶುಭಾಶಯ ಕೋರಿದ್ದಾರೆ.

‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ನರೇಶ್​ ಟ್ವೀಟ್ ಮಾಡಿದ್ದಾರೆ.

ನರೇಶ್ ಅವರಿಗೆ ಇದು ನಾಲ್ಕನೇ ಮದುವೆಯಾಗಿದ್ದು ಪವಿತ್ರಾ ಲೋಕೇಶ್ ಅವರಿಗೆ ಮೂರನೇ ಮದುವೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com