ಬೆಂಗಳೂರು: ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ - ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ. ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕ ಸಚಿವ ಮುನಿರತ್ನ .
ಈ ಸಿನಿಮಾ ಮಾಡಲೆಂದು ಅವರು ಎರಡು ಟೈಟಲ್ ಅನ್ನು ರಿಜಿಸ್ಟರ್ ಕೂಡ ಮಾಡಿಸಿದ್ದಾರೆ. ಕುರುಕ್ಷೇತ್ರ ಸೇರಿದಂತೆ ಹಲವು ಭಾರೀ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಮುನಿರತ್ನ, ಈ ಬಾರಿ ವಿವಾದಿದ ವ್ಯಕ್ತಿಗಳ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಉರಿಗೌಡ –ನಂಜೇಗೌಡ’ ಅಥವಾ ‘ನಂಜೇಗೌಡ-ಉರಿಗೌಡ’ ಎನ್ನುವ ಹೆಸರನ್ನೂ ಇಡಲಿದ್ದಾರೆ. ನಿನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಈಗ ಬಿಜೆಪಿ- ಕಾಂಗ್ರೆಸ್, ಜೆಡಿಎಸ್ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿರುವ ಹೆಸರುಗಳಾದ ಮಂಡ್ಯದ ಉರಿಗೌಡ ಮತ್ತು ನಂಜೇಗೌಡ ಪಾತ್ರಗಳು ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸುಲ್ತಾನನಾಗಿ ಆಡಳಿತ ಮಾಡುತ್ತಿದ್ದ ಟಿಪ್ಪುವನ್ನು ಮಂಡ್ಯದ ಉರಿಗೌಡ, ನಂಜೇಗೌಡ ಕೊಂದಿದ್ದಾರೆ ಎನ್ನಲಾಗುತ್ತಿದೆ.
Advertisement