ನಟ ಸುದೀಪ್ ಗೆ ಬೆದರಿಕೆ ಪತ್ರ: ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ
ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.
Published: 06th May 2023 09:29 AM | Last Updated: 06th May 2023 03:10 PM | A+A A-

ಸುದೀಪ್
ಬೆಂಗಳೂರು: ನಟ ಸುದೀಪ್ ಅವರಿಗೆ ಕೆಲವು ದಿನಗಳ ಹಿಂದಷ್ಟೇ ಅಪರಿಚಿತರಿಂದ ಬೆದರಿಕೆ ಪತ್ರ ಬಂದಿತ್ತು. ಎರಡು ಬಾರಿ ಬೆದರಿಕೆ ಪತ್ರ ಬಂದ ಬಳಿಕ ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರು ರಮೇಶ್ ಕಿಟ್ಟಿ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.
ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ಹಿಂದೆ ಇನ್ನೂ ಕೆಲ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುದೀಪ್ ಅವರ ಆಪ್ತನಾಗಿದ್ದ ರಮೇಶ್ ಈ ಹಿಂದೆ ಹಲವು ಸಿನಿಮಾಗಳನ್ನ ನಿರ್ದೇಶನಕ ಕೂಡ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈಮನಸ್ಸು ಉಂಟಾಗಿತ್ತು. ಈ ವೇಳೆ ನಟ ಸುದೀಪ್ ವಿರುದ್ಧ ನಿರ್ದೇಶಕ ರಮೇಶ್ ಕಿಟ್ಟಿ ಆರೋಪಗಳನ್ನು ಮಾಡಿದ್ರು.
ಜೆ.ಪಿ.ನಗರದಲ್ಲಿರು ಸುದೀಪ್ ಅವರ ಮನೆ ವಿಳಾಸಕ್ಕೆ ಅಂಚೆ ಮೂಲಕ ಎರಡು ಪತ್ರಗಳು ಬಂದಿದ್ದವು. ಬೆದರಿಕೆ ಪತ್ರ ಬಂದಿರುವ ಹಿನ್ನಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.