'ಅಮೃತವರ್ಷಿಣಿ' ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ವಿಧಿವಿಶ
ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
Published: 22nd May 2023 03:39 PM | Last Updated: 22nd May 2023 03:39 PM | A+A A-

ಶರತ್ ಬಾಬು
ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸದ್ಯ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಹಲವು ದಿನಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಶರತ್ ಬಾಬು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಸೋಮವಾರ (ಮೇ 22) ಚಿಕಿತ್ಸೆ ಫಲಕಾರಿಯಾಗದೇ ಶರತ್ ಬಾಬು ಅವರು ನಿಧನರಾಗಿದ್ದಾರೆ. ಶರತ್ ಬಾಬು ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿರುವ ಶರತ್ ಬಾಬು 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳು ಸಿನಿಮಾರಂಗದಲ್ಲಿ ಜನಪ್ರಿಯ ನಟನಾಗಿರುವ ಶರತ್ ಬಾಬು ನಾಯಕನಾಗಿ ಪೋಷಕ ನಟನಾಗಿ ಕಾಣಿಸಿಕೊಂಡಿದ್ದಾರೆ. ರಜನೀಕಾಂತ್ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.