ಚೆನ್ನೈ: ಕಾಲಿವುಡ್ ಚಿತ್ರರಂಗ ಹೆಸರಾಂತ ನಟ ಹಾಗೂ ಡಿಎಂಡಿಕೆ (ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ಅವರು ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.
ಕಳೆದೆರಡು ದಿನಗಳಿಂದ ವಿಜಯಕಾಂತ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ವಿಜಯಕಾಂತ್ ಅತೀವ್ರ ಜ್ವರ, ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳೆಂದು ಡಿಎಂಡಿಕೆ ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ
ಕ್ಯಾಪ್ಟನ್ ವಿಜಯಕಾಂತ್ ಅವರಿಗೆ 71 ವರ್ಷ ವಯಸ್ಸಾಗಿದ್ದು, ವಯೋ ಸಹಜ ಕಾಯಿಲೆಗಳು ಅವರನ್ನು ಕಾಡುತ್ತಿವೆ. ಎರಡು ದಿನಗಳ ಹಿಂದೆ ಅವರು ರೆಗ್ಯುಲರ್ ತಪಾಸಣೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದಾರೆ ಎಂದು ಗೊಂದಲದ ಹೇಳಿಕೆಗಳನ್ನೂ ಪಕ್ಷ ನೀಡಿತ್ತು.
ಇದರ ನಡುವಲ್ಲೇ ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ.
ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿದೆ.
Advertisement