'ಕಂಗುವ' ಶೂಟಿಂಗ್ ವೇಳೆ ಅಪಘಾತ: ನಟ ಸೂರ್ಯ ಆಸ್ಪತ್ರೆಗೆ ದಾಖಲು

‘ಕಂಗುವ‘ ಸಿನಿಮಾದ ಶೂಟಿಂಗ್‌ ವೇಳೆ ಕಾಲಿವುಡ್ ನಟ ಸೂರ್ಯ ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟ ಸೂರ್ಯ
ನಟ ಸೂರ್ಯ

ಚೆನ್ನೈ: ‘ಕಂಗುವ‘ ಸಿನಿಮಾದ ಶೂಟಿಂಗ್‌ ವೇಳೆ ಕಾಲಿವುಡ್ ನಟ ಸೂರ್ಯ ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶೂಟಿಂಗ್ ವೇಳೆ ಸೂರ್ಯ ಅವರ ಭುಜದ ಮೇಲೆ ಕ್ಯಾಮೆರಾ ಬಿದ್ದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಸ್ವತಃ ಸೂರ್ಯ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಅಭಿಮಾನಿಗಳಿಗೆ ಅಭಯ ಹೇಳಿದ್ದಾರೆ.

ಆತಂಕ ಪಡುವಂಥದ್ದು ಏನೂ ಆಗಿಲ್ಲ. ಚೇತರಿಸಿಕೊಳ್ಳುತ್ತಿದ್ದೇನೆ. ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.

ಕಂಗುವ ಚಿತ್ರ ಭಾರಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿದೆ. ಪುರಾತನ ಕಾಲದ ಫ್ಯಾಂಟಸಿ ಕಥಾ ಹಂದರ ಇರುವ ಈ ಸಿನಿಮಾವನ್ನು ಶಿವ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ದಿಶಾ ಪಟಾನಿ ಹಾಗೂ ಖಳನಾಯಕನಾಗಿ ಬಾಬಿ ಡಿಯೋಲ್ ಬಣ್ಣ ಹಚ್ಚಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com