ಸದ್ದಿಲ್ಲದೇ ತೆರೆಕಾಣಲು ಕಾಟೇರ ರೆಡಿ; ಬಿಡುಗಡೆ ದಿನಾಂಕ ಇಲ್ಲಿದೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಚಿತ್ರದ ಬಿಗ್ ಅಪ್ಡೇಡ್ ಹೊರಬಂದಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.
ದರ್ಶನ್
ದರ್ಶನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಚಿತ್ರದ ಬಿಗ್ ಅಪ್ಡೇಡ್ ಹೊರಬಂದಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ಹೌದು ದರ್ಶನ್ ಅಭಿನಯದ ಕಾಟೇರ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು ಡಿಸೆಂಬರ್ 29ರಂದು ಚಿತ್ರ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ತಮ್ಮ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು ತರುಣ್ ಕಿಶೋರ್ ಸುಧೀರ್ ನಿರ್ದೇಶಿಸಿದ್ದಾರೆ. ಇದೊಂದು ನಿಜ ಘಟನೆ ಆಧಾರಿತ ಚಿತ್ರವಾಗಿದೆ.

ರಕ್ತದ ಕಲೆಯಿರುವ ಮಚ್ಚನ್ನು ಹಿಡಿದಿರುವ ದರ್ಶನ್ ಅವರನ್ನು ಶಕ್ತಿಶಾಲಿ ಪಂಚ್‌ಲೈನ್‌ನೊಂದಿಗೆ ತೋರಿಸುವ ಮೂಲಕ ಚಿತ್ರದ ಮೋಷನ್ ಪೋಸ್ಟರ್ ಕೂಡ ಸಾಕಷ್ಟು ಸುದ್ದಿಯಾಯಿತು. ಡಾರ್ಕ್ ಮರೂನ್ ಟಿ-ಶರ್ಟ್ ಮತ್ತು ಲುಂಗಿಯನ್ನು ಧರಿಸಿರುವ ದರ್ಶನ್ ರೈತರ ಹಿನ್ನೆಲೆಯ ನಡುವೆ ಮಚ್ಚನ್ನು ಹಿಡಿದಿದ್ದಾರೆ. ಕಾಟೇರ 1970 ರ ದಶಕದ ಕರ್ನಾಟಕದ ಹಳ್ಳಿಯೊಂದರಲ್ಲಿ ನಡೆದ ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳಲಾಗುತ್ತದೆ.

ಕಾಟೇರ ಸಿನಿಮಾದಲ್ಲಿ ಮಾಲಾಶ್ರೀ ಅವರ ಮಗಳು ರಾಧನಾ ರಾಮ್ ನಟಿಸಿದ್ದು, ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಹಿರಿಯ ನಟರಾದ ಬಿರಾದಾರ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ಜಗಪತಿ ಬಾಬು ಮತ್ತು ಕುಮಾರ್ ಗೋವಿಂದ್ ಕೂಡ ನಟಿಸಿದ್ದಾರೆ. ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com