ಶೂಟಿಂಗ್ ವೇಳೆ ಕ್ವಾರಿಗೆ ಬಿದ್ದ ನಟ ಮಂಡ್ಯ ರಮೇಶ್: ಕೈ-ಕಾಲು ಮೂಳೆ ಮುರಿತ!

ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ.
ಮಂಡ್ಯ ರಮೇಶ್
ಮಂಡ್ಯ ರಮೇಶ್

ಬೆಂಗಳೂರು: ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ 'ಆಸೆ' ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಘಟನೆಯಲ್ಲಿ ನಟ ಮಂಡ್ಯ ರಮೇಶ್​ ಅವರ ಕಾಲು ಮತ್ತು ಮುಂಗೈ ಮುರಿತವಾಗಿದೆ ಎಂದು ವರದಿಯಾಗಿದೆ.

ನಟ ಮಂಡ್ಯ ರಮೇಶ್ ಅವರು ರಮೇಶ್ ಅರವಿಂದ್ ನಿರ್ಮಾಣ ಮಾಡುತ್ತಿರುವ 'ಆಸೆ' ಸೀರಿಯಲ್‌ನಲ್ಲಿ ಪ್ರಮುಖ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಶೂಟಿಂಗ್ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯ ಬಳಿ ನಡೆಯುತ್ತಿತ್ತು, ಈ ವೇಳೆ ದುರ್ಘಟನೆ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಕಾಲಿಗೆ ಎರಡು ಆಪರೇಷನ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್​ ಸ್ಥಳದಲ್ಲಿ ಮೇಲಿಂದ ಬಿದ್ದ ಕಾರಣ ಮುಂಗೈ ಮತ್ತು ಬಲಗಾಲಿಗೆ ತೀವ್ರಗಾಯವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ. ರಮೇಶ್ ಅರವಿಂದ್ ನಿರ್ಮಾಣದ 'ಆಸೆ' ಕನ್ನಡದ ಸ್ಟಾರ್ ಸುವರ್ಣದಲ್ಲಿ 'ಆಸೆ' ಧಾರಾವಾಹಿ ಪ್ರಸಾರವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com