ಸಿನಿಮಾ ಸುದ್ದಿ
ಮಲಯಾಳಂ ನಟಿ ರೆಂಜೂಷಾ ಮೆನನ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ!
ಮಲಯಾಳಂ ನಟಿ ರೆಂಜೂಷಾ ಮೆನನ್ ಅವರು ಸೋಮವಾರ ತಿರುವನಂತಪುರಂನಲ್ಲಿರುವ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತಿರುವನಂತಪುರ: ಮಲಯಾಳಂ ನಟಿ ರೆಂಜೂಷಾ ಮೆನನ್ ಅವರು ಸೋಮವಾರ ತಿರುವನಂತಪುರಂನಲ್ಲಿರುವ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
35 ವರ್ಷದ ರೆಂಜೂಷಾ ತನ್ನ ಕುಟುಂಬದೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ಎಷ್ಟು ಹೊತ್ತಾದರೂ ರೂಮಿನ ಬಾಗಿಲು ತೆಗೆಯದ ಕಾರಣ ಮನೆಯವರಿಗೆ ಅನುಮಾನ ಬಂದಿತ್ತು. ನಂತರ ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸದ್ಯ ವಿಚಾರಣೆ ನಡೆಯುತ್ತಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 35 ವರ್ಷದ ರೆಂಜೂಷಾ ಮೆನನ್ ಆನಂದರಾಗಂನಂತಹ ಜನಪ್ರಿಯ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು.ಕೆಲವು ಮಲಯಾಳಂ ಚಿತ್ರಗಳಲ್ಲೂ ನಟಿಸಿದ್ದರು. ಆತ್ಮಹತ್ಯೆಗೆ ಕಾರಣ ತಿಳಿಯಲು ಶ್ರೀಕರಿಯಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.