10 ವರ್ಷಗಳ ನಂತರ ಸುದೀಪ್ ಮತ್ತೆ ನಿರ್ದೇಶನಕ್ಕೆ: 'ಕೆಕೆ' ಸಿನಿಮಾ ಪೋಸ್ಟರ್ ರಿಲೀಸ್
ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಸುದೀಪ್ ಬಹುಮುಖ ಪ್ರತಿಭೆಯುಳ್ಳ ನಟ. ಸಿನಿಮಾ ನಟನೆಯ ಜೊತೆಗೆ ಸಿನಿಮಾದ ಇತರೆ ಕಲೆಗಳ ಬಗ್ಗೆ ಆಸಕ್ತಿ ವಹಿಸಿರುವುದು ಮಾತ್ರವೇ ಅಲ್ಲದೆ ಕಲೆಗಳಲ್ಲಿ ಪರಿಣಿತಿಯನ್ನೂ ಹೊಂದಿದ್ದಾರೆ.
Published: 02nd September 2023 02:29 PM | Last Updated: 02nd September 2023 03:53 PM | A+A A-

ಸುದೀಪ್
ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಸುದೀಪ್ ಬಹುಮುಖ ಪ್ರತಿಭೆಯುಳ್ಳ ನಟ. ಸಿನಿಮಾ ನಟನೆಯ ಜೊತೆಗೆ ಸಿನಿಮಾದ ಇತರೆ ಕಲೆಗಳ ಬಗ್ಗೆ ಆಸಕ್ತಿ ವಹಿಸಿರುವುದು ಮಾತ್ರವೇ ಅಲ್ಲದೆ ಕಲೆಗಳಲ್ಲಿ ಪರಿಣಿತಿಯನ್ನೂ ಹೊಂದಿದ್ದಾರೆ.
ಅದರಲ್ಲಿಯೂ ಸುದೀಪ್ ಸಿನಿಮಾ ನಿರ್ದೇಶನದ ಬಗ್ಗೆ ಅತೀವ ಆಸಕ್ತಿ, ಒಳ್ಳೆಯ ಪರಿಣಿತಿಯನ್ನೂ ಹೊಂದಿದ್ದಾರೆ. ಇದಕ್ಕೆ ಅವರು ಈ ಹಿಂದೆ ನಿರ್ದೇಶಿಸಿರುವ ಕೆಲವು ಸಿನಿಮಾಗಳೇ ಸಾಕ್ಷಿ. ಆದರೆ ಕಳೆದ 10 ವರ್ಷಗಳಿಂದ ಸುದೀಪ್ ಯಾವುದೇ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿಲ್ಲ. ಆದರೆ ಈಗ ಹೊಸ ಸಿನಿಮಾ ಒಂದನ್ನು ಸುದೀಪ್ ನಿರ್ದೇಶನ ಮಾಡುತ್ತಿದ್ದಾರೆ.
ಇದೀಗ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ.ಆರ್.ಜಿ. ಸ್ಟುಡಿಯೊ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ. ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ.
ಇದನ್ನೂ ಓದಿ: ಕಿಚ್ಚ ಸುದೀಪ್ @50: ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ
ಈ ಚಿತ್ರಕ್ಕೆ 'God Forgives, I don't - King Kichcha' ಎಂಬ ಅಡಿಬರಹವಿದ್ದು, ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
‘ಮೈ ಆಟೋಗ್ರಾಫ್’ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಹುಚ್ಚ’ ಚಿತ್ರದಿಂದ ನಾನು ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರ ಜೊತೆಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಆ ಕನಸು ಇದೀಗ ನನಸಾಗುತ್ತಿದೆ ಎಂದು ನಿರ್ಮಾಪಕ ಕಾರ್ತಿಕ್ ಗೌಡ ಹೇಳಿದ್ದಾರೆ