ಕಿಚ್ಚ ಸುದೀಪ್ @50: ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ

ಸ್ಯಾಂಡಲ್ ವುಡ್ ಬಾದ್ ಶಾ, ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಸೆಪ್ಟೆಂಬರ್ 2ರಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.
ಕಿಚ್ಚ ಸುದೀಪ್ ಹುಟ್ಟುಹಬ್ಬ ಸಂಭ್ರಮ
ಕಿಚ್ಚ ಸುದೀಪ್ ಹುಟ್ಟುಹಬ್ಬ ಸಂಭ್ರಮ

ಬೆಂಗಳೂರು: ಸ್ಯಾಂಡಲ್ ವುಡ್ ಬಾದ್ ಶಾ, ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಸೆಪ್ಟೆಂಬರ್ 2ರಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.

ಕಳೆದ ರಾತ್ರಿಯಿಂದಲೇ ಸಹಸ್ರ ಸಂಖ್ಯೆಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಕೋರಲು ಬೆಂಗಳೂರಿಗೆ ಬರುತ್ತಿದ್ದಾರೆ. ಈ ಬಾರಿ ಕಿಚ್ಚ ಸುದೀಪ್ ತಮ್ಮ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೊಂದಿಗೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಅದ್ದೂರಿ ಸಮಾರಂಭದ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ನಿನ್ನೆ ಶುಕ್ರವಾರ ರಾತ್ರಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಸಂಭ್ರಮದಲ್ಲಿ ಭಾಗಿಯಾಗಿದರು. ಸುದೀಪ್ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ಕೇಕ್ ತಿನ್ನಿಸಿ, ಶುಭಕೋರಿದರು.

ಡ್ರೋಣ್ ಲೈಟಿಂಗ್ ಮೂಲಕ ಪತ್ನಿ ಪ್ರಿಯಾ ಸ್ಪೆಷಲ್ ವಿಶ್ ಮಾಡಿದರು. ಇಂದು ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಸಿನಿಮಾಗಳ ಘೋಷಣೆ: ಕಿಚ್ಚನ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಅವರ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದ್ದು, ಸುದೀಪ್ ಮುಂದಿನ ಚಿತ್ರಕ್ಕೆ ಕೆಆರ್‌ಜಿ ನಿರ್ಮಾಣ ಸಂಸ್ಥೆ ಕೈಜೋಡಿಸಿದ್ದಾರೆ.

‘ಕಿಚ್ಚ 46’ (Kichcha 46) ಸಿನಿಮಾದ ಟೈಟಲ್ ಘೋಷಣೆ ಆಗಿದ್ದು, ಈ ಚಿತ್ರಕ್ಕೆ ‘ಮ್ಯಾಕ್ಸ್’ ಎಂದು ಶೀರ್ಷಿಕೆ ನೀಡಲಾಗಿದೆ. ಸಿನಿಮಾದ ಶೂಟಿಂಗ್ ಸದ್ಯ ಭರದಿಂದ ಸಾಗುತ್ತಿದೆ. ‘ಮ್ಯಾಕ್ಸ್’ ಪ್ಯಾನ್ ಇಂಡಿಯಾ ಸಿನಿಮಾ. ಸಿನಿಮಾದ ಟೈಟಲ್ ಟೀಸರ್ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com