ಗೌರಿ ಗಣೇಶ ಹಬ್ಬ ದಿನ ಜ್ಯೂನಿಯರ್ ಪ್ರಿನ್ಸ್ ಬರಮಾಡಿಕೊಂಡ ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
ಆಕ್ಷನ್ ಪ್ರಿನ್ಸ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟ ಧ್ರುವ ಸರ್ಜಾ (Dhruva Sarja) ಪತ್ನಿ ಪ್ರೇರಣಾ ಗಂಡು ಮಗುವಿಗೆ ಇಂದು ಗೌರಿ ಗಣೇಶ ಹಬ್ಬದ ಶುಭದಿನ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.
Published: 18th September 2023 12:58 PM | Last Updated: 18th September 2023 01:45 PM | A+A A-

ಧ್ರುವ ಸರ್ಜಾ ದಂಪತಿ
ಬೆಂಗಳೂರು: ಆಕ್ಷನ್ ಪ್ರಿನ್ಸ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟ ಧ್ರುವ ಸರ್ಜಾ (Dhruva Sarja) ಪತ್ನಿ ಪ್ರೇರಣಾ ಗಂಡು ಮಗುವಿಗೆ ಇಂದು ಗೌರಿ ಗಣೇಶ ಹಬ್ಬದ ಶುಭದಿನ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.
ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ. ಇತ್ತೀಚೆಗಷ್ಟೇ ಪತ್ನಿ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮವನ್ನು ಧ್ರುವ ಸರ್ಜಾ ತಮ್ಮ ಅಣ್ಣ ಚಿರು ಸರ್ಜಾ ಸಮಾಧಿಯಿರುವ ಫಾರ್ಮ್ ಹೌಸ್ ನಲ್ಲಿ ಅದ್ಧೂರಿಯಾಗಿ ನೆರವೇರಿಸಿದ್ದರು.
ಧ್ರುವ ಸರ್ಜಾ ಹಾಗೂ ಪ್ರೇರಣಾ 2019ರಲ್ಲಿ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್ 2ರಂದು ಧ್ರುವ ಸರ್ಜಾಗೆ ಹೆಣ್ಣು ಮಗು ಜನಿಸಿತು. ಈಗ ಅವರು ಮತ್ತೊಮ್ಮೆ ತಂದೆ ಆಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.