ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಸ್ಟರ್‌ಪೀಸ್ ಎಂದ ಸಮಂತಾ!

ರಕ್ಷಿತ್ ಶೆಟ್ಟಿ ನಟನೆಯ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ' ಎಲ್ಲೆಡೆಯಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ. ಇದೀಗ ನಟಿ ಸಮತಾ ರುತ್ ಪ್ರಭು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.
ನಟಿ ಸಮಂತಾ - ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸ್ಟಿಲ್
ನಟಿ ಸಮಂತಾ - ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸ್ಟಿಲ್

ರಕ್ಷಿತ್ ಶೆಟ್ಟಿ ನಟನೆಯ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ' ಎಲ್ಲೆಡೆಯಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ. ಇದೀಗ ನಟಿ ಸಮತಾ ರುತ್ ಪ್ರಭು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಸಮಂತಾ ಅವರು ಚಿತ್ರವನ್ನು ಹೊಗಳಿದ್ದಾರೆ ಮತ್ತು ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಅವರ ಅಭಿನಯವನ್ನು ಹೈಲೈಟ್ ಮಾಡಿದ್ದಾರೆ.

ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದೆ. ಚಿತ್ರದ ಎರಡನೇ ಭಾಗವು ಅಕ್ಟೋಬರ್ 20 ರಂದು ಬಿಡುಗಡೆಯಾಗಲಿದೆ. ರಕ್ಷಿತ್ ಶೆಟ್ಟಿ ಹೊರತುಪಡಿಸಿ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದು, ತಮ್ಮ ಮನೋಜ್ಞ ಅಭಿನಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ.

ಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಎಲ್ಲೆಡೆ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು.

ಈ ನಡುವೆ ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ ಚಿತ್ರವು ಸೆಪ್ಟೆಂಬರ್ 22 ರಂದು ತೆಲುಗಿನಲ್ಲಿ 'ಸಪ್ತ ಸಾಗರಾಲು ದಾಟಿ' ಎಂಬ ಶೀರ್ಷಿಕೆಯಲ್ಲಿ ಬಿಡುಗಡೆಯಾಗಲಿದೆ.

ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸಹೋದರ ರಕ್ಷಿತ್ ಶೆಟ್ಟಿ! ನಿಮ್ಮ ಇತ್ತೀಚಿನ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ತುಂಬಾ ಚೆನ್ನಾಗಿದೆ! ಅತ್ಯುತ್ತಮ ಚಲನಚಿತ್ರ ನಿರ್ಮಾಣ! ಇಡೀ ತಂಡಕ್ಕೆ ಅಭಿನಂದನೆಗಳು! ಮುಂದಿನ ಭಾಗಕ್ಕಾಗಿ ಕಾಯುತ್ತಿದ್ದೇನೆ' ಎಂದು ಬರೆದಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com