
ಬಿಗ್ ಬಾಸ್ ಸೀಸನ್ 10 ಸ್ಟಿಲ್
ಬೆಂಗಳೂರು: ಅಕ್ಟೋಬರ್ 8ರಿಂದ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾಗುತ್ತಿದೆ. ಆದರೆ ಈ ಬಾರಿ ಬಿಗ್ ಬಾಸ್ ಸಾಮಾನ್ಯವಾಗಿರುವುದಿಲ್ಲ.
ಈ ಬಾರಿಯ ಬಿಗ್ ಬಾಸ್ ಸೀಸನ್ 10 ಹಲವು ವಿಶೇಷತೆಗಳಿಂದ ಕೂಡಿರಲಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ತನ್ನ ಕಲ್ಮಶ ರಹಿತ ಅಭಿನಯ ಮತ್ತು ಮನಸ್ಸಿನಿಂದ ಎಲ್ಲರ ಮನಗೆದ್ದ 777 ಚಾರ್ಲಿ ಸಿನಿಮಾದ ‘ಚಾರ್ಲಿ’ ಈ ಬಾರಿ ಬಿಗ್’ಬಾಸ್ ಮನೆಗೆ ಎಂಟ್ರಿ ಕೊಡ್ತಿದೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ 10ನೇ ಸೀಸನ್ ಆರಂಭಕ್ಕೆ ಡೇಟ್ ಫಿಕ್ಸ್!
ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯೇ ಸ್ಪಷ್ಟ ಮಾಹತಿ ನೀಡಿದ್ದು, ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. “ಬೆಸ್ಟ್ ರೇಟೆಡ್ ಚಲನಚಿತ್ರ 777 ಚಾರ್ಲಿ ಸಿನಿಮಾದ ‘ಚಾರ್ಲಿ’ ಈ ಬಾರಿಯ ಬಿಗ್ ಬಾಸ್ ಸೀಸನ್ 10ರ ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಅಭಿನಂದನೆಗಳು ಚಾರ್ಲಿ” ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದೆ.
ಬೆಸ್ಟ್ ರೇಟೆಡ್ ಚಲನ ಚಿತ್ರ - ಚಾರ್ಲಿ. ಬಿಗ್ ಬಾಸ್ ಸೀಸನ್ 10 ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡ್ತಿರೋ ಚಾರ್ಲಿ!! ಅಭಿನಂದನೆಗಳು ಚಾರ್ಲಿ.
— Colors Kannada (@ColorsKannada) September 23, 2023
ಅನುಬಂಧ AWARDS - 2023 | ಇಂದು-ನಾಳೆ | ಸಂಜೆ 7
#AnubandhaAwards2023 #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/SiRZ9I8oGl