ಹಿರಿಯ ಕನ್ನಡ ಚಿತ್ರನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ, ಐಸಿಯುನಲ್ಲಿ ಚಿಕಿತ್ಸೆ
ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರು ಆರೋಗ್ಯವಾಗಿದ್ದು, ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
Published: 26th September 2023 02:03 PM | Last Updated: 26th September 2023 02:12 PM | A+A A-

ಬ್ಯಾಂಕ್ ಜನಾರ್ಧನ್
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯವಾಗಿದ್ದಾರೆ. ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಹಿರಿಯ ನಟರಾದ ವೈಜನಾಥ್ ಬಿರಾದಾರ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 74 ವರ್ಷದ ಬ್ಯಾಂಕ್ ಜನಾರ್ದನ್ ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಹಲವು ಚಿತ್ರಗಳಲ್ಲಿ ಹಾಸ್ಯ, ಪೋಷಕ ನಟರಾಗಿ ಅಭಿನಯಿಸುವ ಮೂಲಕ ನಾಡಿನಲ್ಲಿ ಜನಪ್ರಿಯರಾಗಿದ್ದಾರೆ. ಅಜಗಜಾಂತರ, ಉಪೇಂದ್ರ ನಿರ್ದೇಶನದ ಶ್, ಜಗ್ಗೇಶ್ ಅಭಿನಯದ ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
2012 ರಲ್ಲಿ ತೆರೆ ಕಂಡರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ಹಾಗೂ ಮೇಘನಾ ಗಾಂವ್ಕರ್ ಅಭಿನಯದ ಸಿನಿಮಾ ತುಗ್ಲಕ್ ಚಿತ್ರದ ನಂತರ ಅಷ್ಟಾಗಿ ಚಿತ್ರಗಳಲ್ಲಿ ಕಾಣಿಸಿಕೊಳ್ಳದ ಬ್ಯಾಂಕ್ ಜನಾರ್ಧನ್ ಬಳಿಕ ಸೀರಿಯಲ್ ನಲ್ಲಿ ನಟಿಸುತ್ತಿದ್ದರು. ಪಾಪ ಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಮತ್ತಿತರ ಸೀರಿಯಲ್ನಲ್ಲಿ ಬ್ಯಾಂಕ್ ಜನಾರ್ದನ್ ಅಭಿನಯಿಸಿದ್ದರು.