'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ.
Published: 26th September 2023 12:24 PM | Last Updated: 26th September 2023 02:12 PM | A+A A-

ನಟ ಸುದೀಪ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಹಾಕಿರುವ ಸುದೀಪ್, ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರವಾದ ತೊಂದರೆಯಾಗಿದೆ.ಮುಂಗಾರಿನ ಹೊರತಾಗಿ ಕುಡಿಯುವ ನೀರಿಗಾಗಿ ಕಾವೇರಿಯನ್ನೇ ನಂಬಿದ್ದೇವೆ. ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿ ತಂತ್ರಜ್ಞರು ಕೂಡಲೇ ಟ್ರಿಬಿನಲ್ ನ್ಯಾಯಾಲಯ ಮತ್ತು ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ ಎಂದಿದ್ದಾರೆ.
— Kichcha Sudeepa (@KicchaSudeep) September 26, 2023
ಇದನ್ನೂ ಓದಿ: ಸುದೀಪ್, ದರ್ಶನ್, ಶಿವಣ್ಣ, ಯಶ್ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ? ತಮಿಳು ಚಿತ್ರ ವಿತರಿಸಿ 36 ಕೋಟಿ ರೂ. ಪಡೆದವರು ಕಾಣೋಲ್ವಾ?
ಸದ್ಯದ ಬರ- ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಹಾಗೂ ರಾಜ್ಯದ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರಕ್ಕೆ ಅರ್ಥ ಮಾಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗುವಂತೆ ಅವರು ಮನವಿ ಮಾಡಿದ್ದಾರೆ. ಕಾವೇರಿ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ- ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವುದಾಗಿ ಹೇಳಿರುವ ಸುದೀಪ್, ನಮ್ಮ ಜಲ ನಮ್ಮ ಹಕ್ಕು ಎಂದಿದ್ದಾರೆ.