
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ ಕನ್ನಡ ಚಿತ್ರರಂಗದ ಕಲಾವಿದರು ಬೆಂಬಲ ಸೂಚಿಸಿದ್ದಾರೆ.
ಸ್ಯಾಂಡಲ್ ವುಡ್ ತಾರೆಯರು ಹಿರಿಯ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಹತ್ತಿರದ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಹಿರಿಯ ನಟ ಶಿವರಾಜ್ ಕುಮಾರ್, ನಟ ಉಪೇಂದ್ರ, ದರ್ಶನ್, ದುನಿಯಾ ವಿಜಯ್, ಹಿರಿಯ ನಟಿ ಉಮಾಶ್ರೀ, ಹಿರಿಯ ನಟ ಶ್ರೀನಾಥ್, ಹಲವು ನಟ-ನಟಿಯರು ಭಾಗಿಯಾಗಿದ್ದಾರೆ.
ಈ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್, ಸರ್ಕಾರ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿಲ್ಲ. ಚಿತ್ರೋದ್ಯಮದಿಂದ ರಾಜ್ಯದ ರೈತರ, ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇವೆ ಎಂದರು.
Advertisement