
ಶುಗರ್ ಫ್ಯಾಕ್ಟರಿ ಚಿತ್ರದ ಸ್ಟಿಲ್.
ದೀಪಿಕ್ ಅರಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರ ನವೆಂಬರ್ 24ರಂದು ಬಿಡುಗಡೆಯಾಗಲಿದೆ.
ಚಿತ್ರ ತಂಡ ಇತ್ತೀಚಿಗೆ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿತ್ತು. ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಇದೀಗ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಇತ್ತೀಚೆಗಷ್ಟೇ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಕಾಂಬಿನೇಷನ್‌ನಲ್ಲಿ 'ಕೌಸಲ್ಯ ಸುಪ್ರಜಾ ರಾಮ' ಸಿನಿಮಾ ರಿಲೀಸ್ ಆಗಿತ್ತು. ಈ ಸಿನಿಮಾ ಫ್ಯಾಮಿಲಿ ಆಡಿಯನ್ಸ್‌ಗೆ ಸಿಕ್ಕಾಪಟ್ಟೆ ಇಷ್ಟನೂ ಆಗಿತ್ತು. 'ಶುಗರ್ ಫ್ಯಾಕ್ಟರಿ' ಸಿನಿಮಾ ಆರಂಭದಿಂದಲೂ ಸಿನಿ ಪ್ರಿಯರ ಗಮನ ಸೆಳೆಯುತ್ತಲೇ ಇದ್ದು, ಸಿನಿಮಾದ ಪೋಸ್ಟರ್, ಫೋಟೊಶೂಟ್, ಟ್ರೈಲರ್ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ: ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾದ 'ಗಟ್ಟಿಮೇಳ' ನಟಿ ಗಗನ ಕುಂಚಿ
ಸಿನಿಮಾವನ್ನು ದೀಪಕ್ ಅರಸ್ ನಿರ್ದೇಶನ ಮಾಡಿದ್ದಾರೆ. ಗಿರೀಶ್ ನಿರ್ಮಿಸಿರುವ 'ಶುಗರ್ ಫ್ಯಾಕ್ಟರಿ' ಸಿನಿಮಾ ಸಾಂಗ್ಸ್ ಹಾಗೂ ಟ್ರೈಲರ್ ಈಗಾಗಲೇ ಫೇಮಸ್ ಆಗಿದೆ.
ಡಾರ್ಲಿಂಗ್ ಕೃಷ್ಣ ವೃತ್ತಿ ಬದುಕಿನಲ್ಲೇ 'ಶುಗರ್ ಫ್ಯಾಕ್ಟರಿ' ಬಿಗ್ ಬಜೆಟ್ ಸಿನಿಮಾ ಎಂದು ಹೇಳಲಾಗುತ್ತಿದೆ. ಡಾರ್ಲಿಂಗ್ ಕೃಷ್ಣ ಜೊತೆ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಚೇತನ್ ಕುಮಾರ್ ಸಂಭಾಷಣೆ, ಕಬೀರ್ ರಫಿ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ.