ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಕೀಳುಮಟ್ಟದ ಪೋಸ್ಟ್: ದರ್ಶನ್ ಅಭಿಮಾನಿಗಳ ವಿರುದ್ಧ ಅಪ್ಪು ಫ್ಯಾನ್ಸ್ ದೂರು!

IPL 2024 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ವಿಚಾರ ಮುಂದಿಟ್ಟುಕೊಂಡು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಕುರಿತು ಕೀಳುಮಟ್ಟದ ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕಿಡಿಗೇಡಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
Ashwini Puneet Rajkumar
ಅಶ್ವಿನಿ ಪುನೀತ್ ರಾಜ್ ಕುಮಾರ್
Updated on

ಬೆಂಗಳೂರು: IPL 2024 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ವಿಚಾರ ಮುಂದಿಟ್ಟುಕೊಂಡು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar)ಕುರಿತು ಕೀಳುಮಟ್ಟದ ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕಿಡಿಗೇಡಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಹೌದು.. ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡದ ಕಳಪೆ ಪ್ರದರ್ಶನಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಕಾರಣ.. ಅವರನ್ನು ಆರ್ ಸಿಬಿ ಈವೆಂಟ್ ಗೆ ಕರೆಸಬಾರದಿತ್ತು ಎನ್ನುವ ಕೀಳುಮಟ್ಟದ ಪೋಸ್ಟ್ ವೊಂದು ಇದೀಗ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ಫ್ಯಾನ್ಸ್ ವಾರ್ ಗೆ ದಾರಿಮಾಡಿಕೊಟ್ಟಿದ್ದು, ನಟ ದರ್ಶನ್ (Actor Darshan) ಅಭಿಮಾನಿಗಳ ವಿರುದ್ಧ ನಟ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕೆಂಡಾಮಂಡಲರಾಗಿದ್ದಾರೆ.

Ashwini Puneet Rajkumar
'ಒಂದು ಕಡೆ ಬೇಸರ, ಒಂದು ಕಡೆ ಖುಷಿ, ಹೆಮ್ಮೆ ಈ ಕ್ಷಣದಲ್ಲಿ ಆಗುತ್ತಿದೆ': ಮೌನ ಮುರಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಈ ಬಾರಿ ಆರ್‌ಸಿಬಿ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಇದರ ಬೆನ್ನಲ್ಲೇ ದರ್ಶನ್‌ (Actor Darshan) ಕೆಲ ಫ್ಯಾನ್ಸ್‌ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ (Ashwini Puneeth Rajkumar) ಅವರನ್ನು ದೂರುತ್ತಿದ್ದಾರೆ. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿದೆ. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕುತ್ತಿದ್ದು, ಇದೀಗ ಆ ಪೋಸ್ಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ. ಈ ಟ್ವೀಟ್​ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. ಈಗಾಗಲೇ ಟ್ವಿಟರ್‌ನಲ್ಲಿ ಈ ಬಗೆಗಿನ ಸ್ಕ್ರೀನ್‌ ಶಾಟ್‌ಗಳು ವೈರಲ್‌ ಆಗುತ್ತಿದೆ.

ನಟ ದರ್ಶನ್ ಅಸಮಾಧಾನ

ಇನ್ನು ಅಭಿಮಾನಿಗಳ ಈ ಕಿಡಿಗೇಡಿತನಕ್ಕೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ತುತ್ತಾಗಿರುವ ನಟ ದರ್ಶನ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ದರ್ಶನ್ ಅವರ ಅಭಿಮಾನಿಯೊಬ್ಬರು ಮಾಹಿತಿ ನೀಡಿದ್ದು, ಇಂತಹ ಕೀಳುಮಟ್ಟದ ಬೆಳವಣಿಗೆಯನ್ನು ನಟ ದರ್ಶನ್ ಸಹಿಸಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com