ಬಹು ನಿರೀಕ್ಷಿತ 'ರಾಮಾಯಣ' ಸಿನಿಮಾಗೆ ಯಶ್ ನಿರ್ಮಾಪಕ!

ರಾಮಾಯಣಕ್ಕೆ ಯಶ್ ಕೂಡ ನಿರ್ಮಾಪಕರಾಗಿದ್ದಾರೆ. ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ.
ಯಶ್
ಯಶ್

ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.

ರಾಮಾಯಣಕ್ಕೆ ಯಶ್ ಕೂಡ ನಿರ್ಮಾಪಕರಾಗಿದ್ದಾರೆ. ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಅವರು ರಾಮ-ಸೀತೆ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಕ್ಕೆ 'ರಾಕಿಂಗ್ ಸ್ಟಾರ್' ಯಶ್ ಹಣ ಹಾಕಲಿದ್ದಾರೆ ಎಂಬ ಈ ವಿಚಾರ ಈಚೆಗೆ ಚರ್ಚೆ ಆಗಿತ್ತು, ಅದೀಗ ನಿಜವಾಗಿದೆ. ಬಹುಕೋಟಿ ವೆಚ್ಚದ 'ರಾಮಾಯಣ' ಸಿನಿಮಾಕ್ಕೆ ಯಶ್ ಕೂಡ ನಿರ್ಮಾಪಕ ಎಂಬುದು ಅಧಿಕೃತವಾಗಿ ಘೋಷಣೆ ಆಗಿದೆ. ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ

ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.

ಯಶ್
Yash: ಯಶ್ ಸಿನಿಮಾ 'ಟಾಕ್ಸಿಕ್' ಶೂಟಿಂಗ್ ಏಪ್ರಿಲ್ ನಲ್ಲಿ ಆರಂಭ, ಬೆಂಗಳೂರಲ್ಲೇ ಬಹುತೇಕ ಚಿತ್ರೀಕರಣ

ಈ ಕುರಿತು ಪ್ರತಿಕ್ರಿಯೆ ನೀಡಿರುವ ನಟ ಯಶ್, "ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವುದು ನನ್ನ ಬಹುದಿನಗಳ ಕನಸಾಗಿದೆ. ಆ ಸಲುವಾಗಿ ನಾನು ಅತ್ಯುತ್ತಮ ವಿಎಫ್‌ಎಕ್ಸ್ ಸ್ಟುಡಿಯೋಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲು ಲಾಸ್‌ಏಂಜಲೀಸ್‌ನಲ್ಲಿದ್ದೆ. ಆಗ ನನಗೆ ಗೊತ್ತಾಗಿದ್ದು, ಈ ವಿಎಫ್‌ಎಕ್ಸ್ ಸ್ಟುಡಿಯೋ ಹಿಂದಿರುವುದ ಓರ್ವ ಭಾರತೀಯ ಎಂದು. ಅವರೇ ನಮಿತ್. ನನ್ನ ಮತ್ತು ನಮಿತ್ ನಡುವೆ ಸಾಕಷ್ಟು ಚರ್ಚೆಗಳು ನಡೆದವು. ನಮ್ಮ ನಡುವಿನ ಸಾಕಷ್ಟು ಕಲ್ಪನೆಗಳು ಒಂದೇ ರೀತಿಯಲ್ಲಿದ್ದವು. ಭಾರತೀಯ ಚಿತ್ರರಂಗದ ದೃಷ್ಟಿಯಲ್ಲಿ ನಮ್ಮ ವಿಚಾರಗಳು ಸಂಪೂರ್ಣವಾಗಿ ಹೊಂದಾಣಿಕೆಯಾಯಿತು. ಈ ಚರ್ಚೆಗಳ ಸಮಯದಲ್ಲಿ, ರಾಮಾಯಣದ ವಿಷಯವು ಬಂತು" ಎಂದು ಯಶ್ ಹೇಳಿದ್ದಾರೆ.

ರಾಮಾಯಣವು ನಮ್ಮ ಬದುಕಿನೊಂದಿಗೆ ಬೆಸೆಯಲ್ಪಟ್ಟಿದೆ. ಅದು ನಮ್ಮೆಲ್ಲರಿಗೂ ಚೆನ್ನಾಗಿ ತಿಳಿದಿದೆ ಎಂದು ನಾವು ನಂಬುತ್ತೇವೆ. ಆದರೂ ಪ್ರತಿಯೊಂದು ಹೊಸ ಮುಖಾಮುಖಿಯು ಹೊಸದೊಂದು ಬುದ್ಧಿವಂತಿಕೆಯನ್ನು ಅನಾವರಣಗೊಳಿಸುತ್ತದೆ, ಹೊಸ ಜ್ಞಾನವನ್ನು ಮತ್ತು ಅನನ್ಯವಾದ ದೃಷ್ಟಿಕೋನಗಳನ್ನು ನೀಡುತ್ತದೆ" ಎಂದು ಯಶ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com