ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವು, ಆತ್ಮಹತ್ಯೆ ಶಂಕೆ!

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನರಾಗಿದ್ದು, ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.
ನಿರ್ಮಾಪಕ ಸೌಂದರ್ಯ ಜಗದೀಶ್(ಸಂಗ್ರಹ ಚಿತ್ರ)
ನಿರ್ಮಾಪಕ ಸೌಂದರ್ಯ ಜಗದೀಶ್(ಸಂಗ್ರಹ ಚಿತ್ರ)
Updated on

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನರಾಗಿದ್ದು, ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಇಂದು ಭಾನುವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನ ತಮ್ಮ ನಿವಾಸದಲ್ಲಿ ಸಾವಿಗೀಡಾಗಿದ್ದು, ತೀವ್ರ ಆರ್ಥಿಕ ಸಮಸ್ಯೆಯಿಂದ ಇತ್ತೀಚೆಗೆ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಅವರ ಮನೆಯನ್ನು ಬ್ಯಾಂಕ್ ಅಧಿಕಾರಿಗಳು ಸೀಜ್ ಮಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಸದ್ಯ ಅವರ ಮೃತದೇಹವನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿಡಲಾಗಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್(ಸಂಗ್ರಹ ಚಿತ್ರ)
ಹಲ್ಲೆ ಪ್ರಕರಣ: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಸದಸ್ಯರ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ

ಇತ್ತೀಚೆಗೆ ಅವರ ಪುತ್ರಿ ಸೌಂದರ್ಯ ವಿವಾಹ ನೆರವೇರಿತ್ತು. ಕನ್ನಡದಲ್ಲಿ ಅವರು ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು, ಮಸ್ತ್ ಮಜಾ ಮಾಡಿ ಇತ್ಯಾದಿ ಚಿತ್ರಗಳನ್ನು ನಿರ್ಮಿಸಿದ್ದರು. ತಮ್ಮ ಪುತ್ರನನ್ನು ಸ್ಯಾಂಡಲ್ ವುಡ್ ನಲ್ಲಿ ಉತ್ತಮ ನಟನಾಗಿ ಮಾಡಬೇಕೆಂಬ ಪ್ರಯತ್ನ ಯಶಸ್ಸು ಕಂಡಿರಲಿಲ್ಲ.

ನಿರ್ಮಾಪಕ ಸೌಂದರ್ಯ ಜಗದೀಶ್(ಸಂಗ್ರಹ ಚಿತ್ರ)
ಡ್ರಗ್ಸ್ ಪ್ರಕರಣ: 'ರಾಮ್ ಲೀಲಾ' ನಿರ್ಮಾಪಕ ಸೌಂದರ್ಯ ಜಗದೀಶ್ ವಿಚಾರಣೆ

ಇತ್ತೀಚೆಗೆ ರಾಜಾಜಿನಗರದಲ್ಲಿರುವ ಅವರ ಒಡೆತನದ ಜೆಟ್ ಲ್ಯಾಗ್ ಪಬ್ ನಲ್ಲಿ ನಟ ದರ್ಶನ್ ನಟನೆಯ ಯಶಸ್ಸು ಕಂಡ ಕಾಟೇರ ಚಿತ್ರತಂಡ ಅವಧಿ ಮೀರಿ ಪಾರ್ಟಿ ನಡೆಸಿ ಪೊಲೀಸರಿಂದ ನೊಟೀಸ್ ಪಡೆದಿತ್ತು. ಇತ್ತೀಚೆಗೆ ಸೌಂದರ್ಯ ಜಗದೀಶ್ ಅವರು ಸಾಕಷ್ಟು ವಿವಾದಗಳಿಗೆ ಸಿಲುಕಿದ್ದರು.

ಪತ್ನಿ ರೇಖಾ ಜಗದೀಶ್ , ಮಗ ನಟ ಸ್ನೇಹಿತ್, ಓರ್ವ ಪುತ್ರಿ ಸೇರಿ ಅಪಾರ ಬಂಧು ಬಳಗದವರನ್ನು, ಚಿತ್ರರಂಗದ ಸ್ನೇಹಿತರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com