ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ; ಅಪರಾಧಿಗೆ ಅತ್ಯುಗ್ರ ಶಿಕ್ಷೆಯಾಗಲಿ: ಧ್ರುವ ಸರ್ಜಾ

ಹುಬ್ಬಳ್ಳಿಯಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ.
ಧ್ರುವ ಸರ್ಜಾ
ಧ್ರುವ ಸರ್ಜಾ

ಬೆಂಗಳೂರು: ಹುಬ್ಬಳ್ಳಿಯಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕಾಲೇಜು ಕ್ಯಾಂಪಸ್​ನಲ್ಲೇ ಹತ್ಯೆಯಾಗಿರುವುದು ನಿಜಕ್ಕೂ ಆತಂಕ ಮೂಡಿಸುತ್ತದೆ.

ಸರ್ಕಾರ ಶೀಘ್ರವೇ ಈ ಪ್ರಕರಣವನ್ನು ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಹಾಗೂ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಧ್ರುವ ಸರ್ಜಾ ತಮ್ಮ ‘ಎಕ್ಸ್​’ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಮೂಲಕ ಧ್ರುವ ಸರ್ಜಾ ಅವರು ನೇಹಾ ಹಿರೇಮಠ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com