ನಟಿ ಸಮಂತಾಗೆ 37ನೇ ಹುಟ್ಟುಹಬ್ಬದ ಸಂಭ್ರಮ; ಹೊಸ ಚಿತ್ರ 'ಬಂಗಾರಂ' ಘೋಷಣೆ

ನಟಿ ಸಮಂತಾ ರುತ್ ಪ್ರಭು ಅವರು ಭಾನುವಾರ ತಮ್ಮ 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಸಮಂತಾ ಹುಟ್ಟುಹಬ್ಬಕ್ಕೆ ಹಲವಾರು ಸೆಲೆಬ್ರಿಟಿಗಳು ಶುಭ ಕೋರಿದ್ದು, ಖುಷಿ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಕೂಡ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಮಂತಾ
ಸಮಂತಾ
Updated on

ನವದೆಹಲಿ: ನಟಿ ಸಮಂತಾ ರುತ್ ಪ್ರಭು ಅವರು ಭಾನುವಾರ ತಮ್ಮ 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಸಮಂತಾ ಹುಟ್ಟುಹಬ್ಬಕ್ಕೆ ಹಲವಾರು ಸೆಲೆಬ್ರಿಟಿಗಳು ಶುಭ ಕೋರಿದ್ದು, ಖುಷಿ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಕೂಡ ಶುಭಾಶಯಗಳನ್ನು ತಿಳಿಸಿದ್ದಾರೆ.

'ಹ್ಯಾಪಿ ಬರ್ತ್‌ಡೇ ಸಾಮಿ, ಸದಾ ಖುಷಿಯಾಗಿರಿ ಮತ್ತು ಆರೋಗ್ಯವಾಗಿರಿ ಎಂದು ‘ಖುಷಿ’ ಸಿನಿಮಾ ಪ್ರೀ- ರಿಲೀಸ್ ಕಾರ್ಯಕ್ರಮದಲ್ಲಿ ಸಮಂತಾ ಜೊತೆ ಆತ್ಮೀಯವಾಗಿದ್ದ ಫೊಟೋಗಳನ್ನು ಶೇರ್‌ ಮಾಡಿ ವಿಜಯ್ ಶುಭಕೋರಿದ್ದಾರೆ. ವಿಜಯ್ ಪೋಸ್ಟ್‌ಗೆ ಸಮಂತಾ ಕೂಡ ರಿಯಾಕ್ಟ್ ಮಾಡಿ, ಧನ್ಯವಾದ ತಿಳಿಸಿದ್ದಾರೆ.

2022ರಲ್ಲಿ ಮಯೋಸಿಟಿಸ್ ರೋಗದಿಂದ ಬಳಲುತ್ತಿದ್ದ ಸಮಂತಾ ಅವರು ಏಳು ತಿಂಗಳ ವಿರಾಮದ ನಂತರ ಕೆಲಸಕ್ಕೆ ಮರಳುವುದಾಗಿ ಹೇಳಿದ್ದರು. ಅದಾದ ಹಲವು ತಿಂಗಳುಗಳ ನಂತರ ಇದೀಗ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ.

ತ್ರಲಾಲ ಮೂವಿಂಗ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ 'ಬಂಗಾರಂ' ಸಿನಿಮಾ ನಿರ್ಮಾಣವಾಗಲಿದೆ. ಮುಂಬರುವ ಚಿತ್ರದ ಟೈಟಲ್ ಅನೌನ್ಸ್‌ಮೆಂಟ್ ಟೀಸರ್ ಅನ್ನು ಸಮಂತಾ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದಾರೆ.

ಬಂಗಾರವಾಗಲು ಎಲ್ಲವೂ ಮಿನುಗಬೇಕಿಲ್ಲ. ತ್ರಲಾಲ ಮೂವಿಂಗ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ 'ಬಂಗಾರಂ' ಶೀಘ್ರದಲ್ಲೇ ಪ್ರಾರಂಭವಾಗುತ್ತದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸಮಂತಾ ವರುಣ್ ಧವನ್ ಜೊತೆಗೆ ಪ್ರೈಮ್ ವಿಡಿಯೋ ಸರಣಿ 'ಸಿಟಾಡೆಲ್: ಹನಿ ಬನಿ'ಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com