ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಹೆಸರಾಂತ ಸಾಹಿತಿ ಡಾ. ಡಿ.ವಿ.ಗುಂಡಪ್ಪ (ಡಿವಿಜಿ) ಅವರ ಜನಪ್ರಿಯ ಪದ್ಯ ಪುಸ್ತಕ ಮಂಕುತಿಮ್ಮನ ಕಗ್ಗ. ಇದೀಗ ಇದೇ ಮಂಕುತಿಮ್ಮನ ಕಗ್ಗ ಸಿನಿಮಾ ರೂಪ ಪಡೆದುಕೊಂಡಿದೆ.
ರಾಜ ರವಿಶಂಕರ್ (ವಿ.ರವಿ) ನಿರ್ದೇಶಿಸಿ ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್.ಎ. ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ ಶಿವಕುಮಾರ್ ಸಹ ನಿರ್ಮಾಣವಿರುವ ಈ ಚಿತ್ರದ ಸ್ವಾಮಿದೇವನೇ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ಈ ಗೀತೆಯನ್ನು “ಮಂಕುತಿಮ್ಮನ ಕಗ್ಗ” ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಎ.ಟಿ. ರವೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಸೆನ್ಸಾರ್ ಮಂಡಳಿ ಸಹ ಚಿತ್ರಕ್ಕೆ ಮೆಚ್ಚುಗೆಯ ಮಾತುಗಳಾಡಿದೆ. ತುಮಕೂರಿನ ಮಧುಗಿರಿ ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಸೋಮಿ (ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಬಾಲಕ ಸೋಮಿ (ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
Advertisement