
ಬೆಂಗಳೂರು : ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಕಮ್ ನಿರ್ಮಾಪಕ ಕೆ ಪ್ರಭಾಕರ್(64) ನಿಧನರಾಗಿದ್ದಾರೆ. ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಕೆಲ ದಿನಗಳ ಹಿಂದಷ್ಟೇ ಹೃದಯಾಘಾತಕ್ಕೆ ಒಳಗಾಗಿದ್ದ ಕೆ ಪ್ರಭಾಕರ್ ಅವರನ್ನು ಅಪೋಲೋ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಪಲಿಸದೆ ನಿಧನರಾಗಿದ್ದಾರೆ.
ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನ ಕೊಟ್ಟ ನಿರ್ಮಾಪಕರಾಗಿರುವ ಪ್ರಭಾಕರ್ ಅವರು ವಿಷ್ಣುವರ್ಧನ್, ಉಪೇಂದ್ರ, ಅಂಬರೀಶ್, ಶಶಿಕುಮಾರ್ ಅವರ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಅವಳೇ ನನ್ನ ಗೆಳತಿ, ಮುದ್ದಿನ ಮಾವ, ತುಂಬಿದ ಮನೆ, ಸೋಲಿಲ್ಲದ ಸರದಾರ, ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿದವರಲ್ಲಿ ಕೆ.ಪ್ರಭಾಕರ್ ಕೂಡ ಒಬ್ಬರು. ಶಿವರಾಜ್ ಕುಮಾರ್ ಮತ್ತು ರಾಧಿಕಾ ಕುಮಾರಸ್ವಾಮಿ ನಟನೆಯ ‘ಅಣ್ಣ – ತಂಗಿ’ ಚಿತ್ರಕ್ಕೂ ಇವರೇ ನಿರ್ಮಾಪಕರಾಗಿದ್ದರು. ಇದಲ್ಲದೆ ಗ್ಯಾಂಗ್ ಲೀಡರ್, ಸೇರಿದಂತೆ ಕನ್ನಡದಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ತೆಲುಗು ಚಿತ್ರರಂಗದಲ್ಲೂ ಕೂಡ ಹಲವು ಚಿತ್ರಕ್ಕೆ ಬಂಡವಾಳ ಹೂಡಿದ್ದರು.
ಕಾಶಿನಾಥ್-ಭವ್ಯ ನಟನೆಯ ‘ಅವಳೇ ನನ್ನ ಹೆಂಡ್ತಿ’, ವಿಷ್ಣುವರ್ಧನ್-ಪ್ರೇಮಾ ಅಭಿನಯದ ‘ಎಲ್ಲರಂಥಲ್ಲ ನನ್ನ ಗಂಡ’, ಉಪೇಂದ್ರ-ಶಿವರಾಜ್ಕುಮಾರ್ ಒಟ್ಟಾಗಿ ಅಭಿನಯಿಸಿದ ‘ಲವ-ಕುಶ’ ಮುಂತಾದ ಸಿನಿಮಾಗಳನ್ನು ಕೆ. ಪ್ರಭಾಕರ್ ಅವರು ನಿರ್ಮಾಣ ಮಾಡಿದ್ದರು. ಕೌಟುಂಬಿಕ ಪ್ರೇಕ್ಷಕರನ್ನು ರಂಜಿಸುವಂತಹ ಸಿನಿಮಾಗಳನ್ನು ಮಾಡಿ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.
Advertisement