
ಬೆಂಗಳೂರು: ವೈಲ್ಡ್ ಕಾರ್ಡ್ ಮೂಲಕ ಬಿಗ್‌ಬಾಸ್ ಸೀಸನ್- 11ಕ್ಕೆ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಈ ವಾರ ಮನೆಯಿಂದ ಹೊರಬಂದಿದ್ದರು. ಇದರ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ಸಹ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದು ತೀವ್ರ ಕುತೂಹಲ ಕೆರಳಿಸಿತ್ತು.
ಜೈತ್ರಾ ಕುಂದಾಪುರ ಅವರು ಯಾವ ಕಾರಣಕ್ಕೆ ದೊಡ್ಮನೆಯಿಂದ ಹೊರಬಂದರೂ ಎಂಬುವುದಕ್ಕೆ ಉತ್ತರ ಸಿಕ್ಕಿದೆ. ಚುನಾವಣೆಗೆ ಟಿಕೆಟಿ ಕೊಡಿಸುವುದಾಗಿ ಭರವಸೆ ನೀಡಿ 5 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಪ್ರಕರಣ ಸಂಬಂಧ ಚೈತ್ರ ಕುಂದಾಪುರ ಇಂದು ನ್ಯಾಯಾಲಯಕ್ಕೆ ಹಾಜರಾಗಲು Bigg Boss ಮನೆಯಿಂದ ಹೊರಬಂದಿದ್ದರು.
ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿತ್ತು. ಹೀಗಾಗಿ ಇಂದು ಚೈತ್ರಾ ಕುಂದಾಪುರ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
Advertisement