ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ; ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ

ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.
Allu Arjun arrested
ಅಲ್ಲು ಅರ್ಜುನ್ ಬಂಧಿಸಿದ ಪೊಲೀಸರು
Updated on

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.

ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿಸೆಂಬರ್ 4 ರಂದು ಘಟನೆ ನಡೆದಿತ್ತು.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚಿಕ್ಕಡಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಅಲ್ಲು ಅರ್ಜುನ್ ಮನೆಗೆ ಹೋಗಿ, ಅವರ ಬೆಡ್​ ರೂಂ ಬಳಿಗೆ ಹೋಗಿ ಅಲ್ಲು ಅರ್ಜುನ್ ಅನ್ನು ಕರೆತರಲಾಗಿದೆ. ಅಲ್ಲು ಅರ್ಜುನ್ ಪೊಲೀಸ್ ಜೀಪು ಹತ್ತುವ ಮುಂಚೆ ಪೊಲೀಸರು ತಮ್ಮನ್ನು ಬಂಧಿಸಿದ ವಿಧಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ನಂತರ ಅಲ್ಲು ಅರ್ಜುನ್ ಪೊಲೀಸ್ ಜೀಪು ಹತ್ತುವ ವೇಳೆ, ಅವರ ತಂದೆ ಅಲ್ಲು ಅರವಿಂದ್ ಸಹ ಪೊಲೀಸ್ ಜೀಪು ಹತ್ತಿದ್ದರು, ಆದರೆ ಪೊಲೀಸರು ಅವರನ್ನು ಕೆಳಗೆ ಇಳಿಸಿ, ಕೇವಲ ಅಲ್ಲು ಅರ್ಜುನ್ ಅನ್ನು ಮಾತ್ರವೇ ಬಂಧಿಸಿ ಕರೆದೊಯ್ದಿದ್ದಾರೆ. ಅಲ್ಲು ಅರ್ಜುನ್ ಬಂಧಿಸಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

ಡಿಸೆಂಬರ್ 4 ರಂದು ರಾತ್ರಿ 9:40 ರ ಸುಮಾರಿಗೆ ಪುಷ್ಪ 2 ಪ್ರೀಮಿಯರ್‌ಗಾಗಿ ಥಿಯೇಟರ್‌ನಲ್ಲಿ ದೊಡ್ಡ ಸಂಖ್ಯೆಯ ಜನರು ಜಮಾಯಿಸಿದ್ದರು. ಥಿಯೇಟರ್ ಆಡಳಿತವು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲು ಅಥವಾ ಚಲನಚಿತ್ರದ ಕೆಲವು ಪ್ರಮುಖ ನಟರ ಯೋಜಿತ ಪ್ರದರ್ಶನದ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ವಿಫಲವಾಗಿತ್ತು ಇದು ಅವ್ಯವಸ್ಥೆಗೆ ಕಾರಣವಾಯಿತು.

Allu Arjun arrested
Pushpa-2: ನೂಕುನುಗ್ಗಲಿನಲ್ಲಿ ಮಹಿಳೆ ಸಾವು; ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ ನೆರವು ಘೋಷಣೆ

ಸರಿಸುಮಾರು ರಾತ್ರಿ 9:30 ಕ್ಕೆ, ಅಲ್ಲು ಅರ್ಜುನ್ ಅವರು ತಮ್ಮ ವೈಯಕ್ತಿಕ ಭದ್ರತಾ ತಂಡದೊಂದಿಗೆ ಥಿಯೇಟರ್‌ಗೆ ಆಗಮಿಸಿದರು, ಅವರನ್ನು ನೋಡಲು ಜನರು ಉತ್ಸುಕರಾಗಿದ್ದರು. ಕೆಳಗಿನ ಬಾಲ್ಕನಿ ಪ್ರದೇಶಕ್ಕೆ ಪ್ರವೇಶಿಸಲು ಅವರ ಭದ್ರತಾ ತಂಡವು ಗುಂಪನ್ನು ತಳ್ಳಿತು. ನಂತರದ ಅವಾಂತರದಲ್ಲಿ ರೇವತಿ ಮತ್ತು ಆಕೆಯ ಮಗ ಶ್ರೀತೇಜ್ ಸಿಲುಕಿ ಉಸಿರುಗಟ್ಟಿದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ರೇವತಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು, ಆದರೆ ಶ್ರೀತೇಜ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com