ಇದೆಲ್ಲಾ ಬೇಡವೇ ಬೇಡ: ಅಭಿಮಾನಿಗಳಿಗೆ ನಟ ಯಶ್ ಖಡಕ್ ಸಂದೇಶ!

2024ರಲ್ಲಿ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ನೆಚ್ಚಿನ ನಟನ ಫ್ಲೆಕ್ಸ್​ ನಿಲ್ಲಿಸುವಾಗ ಮೂವರು ಅಭಿಮಾನಿಗಳು ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದರು. ಆ ಘಟನೆಯಿಂದ ಯಶ್ ಮನಸ್ಸಿಗೆ ತೀವ್ರ ನೋವಾಗಿತ್ತು.
Yash-Radhika Pandit
ಯಶ್-ರಾಧಿಕಾ ಪಂಡಿತ್
Updated on

ರಾಕಿಂಗ್ ಸ್ಟಾರ್ ಯಶ್ ಈ ಹಿಂದೆ ತಮ್ಮ ಹುಟ್ಟುಹಬ್ಬದ ದಿನ ನಡೆದಂತಹ ದುರಂತಗಳಿಂದ ಸಾಕಷ್ಟು ನೊಂದಿದ್ದಾರೆ. ಹೀಗಾಗಿ ಯಶ್ ಅವರು ಅಭಿಮಾನಿಗಳಿಗೆ ಒಂದು ಮುಖ್ಯವಾದ ಸಂದೇಶವನ್ನು ನೀಡಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಇನ್ನು ಕೆಲವೇ ದಿನಗಳು ಇರುವಾಗಲೇ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಲ್ಲಿ ಒಂದು ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಆಡಂಬರ ಇಲ್ಲದೇ ತಮ್ಮ ಹುಟ್ಟುಹಬ್ಬವನ್ನು ಆಚರಿಸುವಂತೆ ಅಭಿಮಾನಿಗಳನ್ನು ಯಶ್ ಕೇಳಿಕೊಂಡಿದ್ದಾರೆ.

ಕೆಜಿಎಫ್ 1,2 ನಂತರ ಬ್ಲಾಕ್ ಬಸ್ಟರ್ ಚಿತ್ರದ ನಂತರ ಯಶ್ ಇದೀಗ ಟಾಕ್ಸಿಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಕಾರಣ ತಾವು ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿ ಇರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಫ್ಲೆಕ್ಸ್, ಬ್ಯಾನರ್​ಗಳ ಯಾವುದೇ ಆಡಂಬರ ಮಾಡದೇ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೇ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ ಎಂದು ಯಶ್​ ಪೋಸ್ಟ್ ಮಾಡಿದ್ದಾರೆ.

2024ರಲ್ಲಿ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ನೆಚ್ಚಿನ ನಟನ ಫ್ಲೆಕ್ಸ್​ ನಿಲ್ಲಿಸುವಾಗ ಮೂವರು ಅಭಿಮಾನಿಗಳು ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದರು. ಆ ಘಟನೆಯಿಂದ ಯಶ್ ಮನಸ್ಸಿಗೆ ತೀವ್ರ ನೋವಾಗಿತ್ತು. ಆ ರೀತಿಯ ಘಟನೆಗಳು ಮತ್ತೆ ನಡೆಯಬಾರದು ಎಂಬ ಕಾಳಜಿಯಿಂದ ಯಶ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

Yash-Radhika Pandit
UI: ಉಪೇಂದ್ರ ನಿರ್ದೇಶನದ ಚಿತ್ರ ನೋಡಿ ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ!

1986ರ ಜನವರಿ 8ರಂದು ಯಶ್ ಜನಿಸಿದ್ದರು. 2025ರ ಜನವರಿ 8ಕ್ಕೆ ಯಶ್ ಅವರು 39ರ ವಸಂತಕ್ಕೆ ಕಾಲಿಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com