ಅಂಜನಾ ಭೌಮಿಕ್
ಅಂಜನಾ ಭೌಮಿಕ್

ಹಿರಿಯ ನಟಿ ಅಂಜನಾ ಭೌಮಿಕ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಅಂಜನಾ ಭೌಮಿಕ್ ಅವರು ಶನಿವಾರ ಕೋಲ್ಕತ್ತಾದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
Published on

ಕೋಲ್ಕತ್ತಾ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಅಂಜನಾ ಭೌಮಿಕ್ ಅವರು ಶನಿವಾರ ಕೋಲ್ಕತ್ತಾದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 79 ವರ್ಷ ಅಂಜನಾ ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 10:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ನಟಿ ಅಂಜನಾ ಅವರು ಫೆಬ್ರವರಿ 16 ರಂದು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಅಂಜನಾ ಭೌಮಿಕ್
ರಾಜಮೌಳಿ ನಿರ್ದೇಶನದ 'RRR' ಸಿನಿಮಾ ಕ್ಯಾಮರಾಮೆನ್ ಸೆಂಥಿಲ್ ಕುಮಾರ್ ಪತ್ನಿ ನಿಧನ

ಹಿರಿಯ ನಟಿ, ನಿಲಾಂಜನಾ ಸೆಂಗುಪ್ತ ಮತ್ತು ಚಂದನಾ ಭೌಮಿಕ್ ಎಂಬ ಪುತ್ರಿಯರನ್ನು ಅಗಲಿದ್ದಾರೆ.

ಅಂಜನಾ ಭೌಮಿಕ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಅಂಜನಾ ಅವರು 'ನಿಶಿಬಾಸರ್', 'ಪ್ರಥಮ್ ಬಸಂತ' ಮತ್ತು ಇತರ ಕ್ಲಾಸಿಕ್‌ ಚಿತ್ರಗಳಲ್ಲಿನ ಪಾತ್ರಕ್ಕಾಗಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.

2012 ರಲ್ಲಿ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ರಾಜ್ಯ ಸರ್ಕಾರ, ವಿಶೇಷ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com