ಯುವ ರಾಜ್‌ಕುಮಾರ್ ನಟನೆಯ 'ಯುವ' ಬಿಡುಗಡೆಗೆ ಸಜ್ಜು; ಆಡಿಯೋ ಹಕ್ಕು ಭಾರಿ ಬೆಲೆಗೆ ಮಾರಾಟ!

ತಮ್ಮ ಚೊಚ್ಚಲ ಚಿತ್ರದೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿರುವ ರಾಜ್‌ಕುಮಾರ್ ಅವರ ಮೊಮ್ಮಗ ಯುವ ರಾಜ್‌ಕುಮಾರ್ ಅವರ ಯುವ ಚಿತ್ರದ ಸುತ್ತ ವ್ಯಾಪಕ ನಿರೀಕ್ಷೆ ಮನೆಮಾಡಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ 3 ಕೋಟಿಗೂ ಹೆಚ್ಚು ಬೆಲೆಗೆ ಪಡೆದುಕೊಂಡಿದೆ ಎಂದು ವರದಿಯಾಗಿದೆ.
ಯುವ ಚಿತ್ರತಂಡ
ಯುವ ಚಿತ್ರತಂಡ

ತಮ್ಮ ಚೊಚ್ಚಲ ಚಿತ್ರದೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿರುವ ಲೆಜೆಂಡರಿ ರಾಜ್‌ಕುಮಾರ್ ಅವರ ಮೊಮ್ಮಗ ಯುವ ರಾಜ್‌ಕುಮಾರ್ ಅವರ ಯುವ ಚಿತ್ರದ ಸುತ್ತ ವ್ಯಾಪಕ ನಿರೀಕ್ಷೆ ಮನೆಮಾಡಿದೆ. ಸಂತೋಷ್ ಆನಂದ್‌ರಾಮ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ನಿರ್ಮಿಸಲಾದ ಯೂತ್ ಆಕ್ಷನ್ ಎಂಟರ್‌ಟೈನರ್ ಅನ್ನು ಮಾರ್ಚ್ 29 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಕೆಜಿಎಫ್ ಮತ್ತು ಕಾಂತಾರಂತಹ ಬ್ಲಾಕ್‌ಬಸ್ಟರ್‌ ಚಿತ್ರಗಳನ್ನು ನೀಡಿದ ಹೆಸರಾಂತ ನಿರ್ಮಾಣ ಸಂಸ್ಥೆಯೊಂದಿಗೆ ಕೈಜೋಡಿಸಿರುವುದು ಮತ್ತು ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಮತ್ತು ರಾಜಕುಮಾರನಂತಹ ಹಿಟ್‌ ಸಿನಿಮಾಗಳಿಗೆ ಹೆಸರಾದ ಸಂತೋಷ್ ಆನಂದ್‌ರಾಮ್ ಅವರ ನಿರ್ದೇಶನದ ಯುವ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.

ಯುವ ಚಿತ್ರತಂಡ
ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಯುವ ರಾಜ್ ಕುಮಾರ್ ಚೊಚ್ಚಲ ಚಿತ್ರ ಬಿಡುಗಡೆ 

ಇತ್ತೀಚಿನ ಬೆಳವಣಿಗೆಯಲ್ಲಿ, ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ 3 ಕೋಟಿಗೂ ಹೆಚ್ಚು ಬೆಲೆಗೆ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಹೊಸಬರ ಚಿತ್ರವೊಂದಕ್ಕೆ ಇಷ್ಟು ಮೊತ್ತ ನೀಡಿ ಖರೀದಿಸಿರುವುದು ದಾಖಲೆಯಾಗಿದೆ. ಚಿತ್ರದ ಕಥಾವಸ್ತು ಮತ್ತು ಪಾತ್ರವರ್ಗದ ವಿವರಗಳನ್ನು ಇನ್ನೂ ಮುಚ್ಚಿಡಲಾಗಿದ್ದರೂ, ಯುವ ಸಿನಿಮಾದ ನಾಯಕಿಯಾಗಿ ಸಪ್ತಮಿ ಗೌಡ ಮತ್ತು ಪ್ರಮುಖ ಪಾತ್ರದಲ್ಲಿ ಅಚ್ಯುತ್ ಕುಮಾರ್ ನಟಿಸಿದ್ದಾರೆ. ಯುವ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com