ಸಿಎಂ ಸಿದ್ದರಾಮಯ್ಯರೊಂದಿಗೆ ಡಾಲಿ ಧನಂಜಯ್
ಸಿಎಂ ಸಿದ್ದರಾಮಯ್ಯರೊಂದಿಗೆ ಡಾಲಿ ಧನಂಜಯ್

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ

ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
Published on

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29 ರಂದು ಆರಂಭವಾಗುತ್ತಿದ್ದು, ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್‌ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು ಕೋರಿರುತ್ತಾರೆ. ಇದೀಗ ಸರ್ಕಾರ ನಟ ಡಾಲಿ ಧನಂಜಯ್ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರೊಂದಿಗೆ ಡಾಲಿ ಧನಂಜಯ್
ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಫೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದು, ಮಾರ್ಚ್ 1 ರಿಂದ ಮಾರ್ಚ್ 7ರ ವರೆಗೆ ಸಿನಿಮಾಗಳ ಪ್ರದರ್ಶನ ನಡೆಯಲಿದೆ.

X

Advertisement

X
Kannada Prabha
www.kannadaprabha.com