ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ. ಶಿವರಾಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

'ಬಾ ನಲ್ಲೆ ಮಧು ಚಂದ್ರಕೆ' ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ. ಸದ್ಯಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಕೆ. ಶಿವರಾಮ್
ಕೆ. ಶಿವರಾಮ್

ಬೆಂಗಳೂರು: ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ 'ಬಾ ನಲ್ಲೆ ಮಧು ಚಂದ್ರಕೆ' ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ. ಸದ್ಯಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾದರು. ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದ್ದ ಕೆ ಶಿವರಾಮ್ , ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ರಾಜಕೀಯಕ್ಕೂ ಧುಮುಕ್ಕಿದ್ದ ಶಿವರಾಮ್: 2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com