ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮ

ಬೆಂಗಳೂರು: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.

ಇಂದು ಸಂಜೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಟ ಡಾ. ಶಿವರಾಜ್ ಕುಮಾರ್, ಚಿತ್ರೋತ್ಸವದ ರಾಯಭಾರಿ ಡಾಲಿ ಧನಂಜಯ, ಬಾಂಗ್ಲಾ ನಟಿ ಅಜ್ಮೇರಿ ಬಂಧಾನ್, ನಿರ್ದೇಶಕ ಡಾ. ಜಬ್ಬರ್ ಪಟೇಲ್ ಮತ್ತಿತರರು ಭಾಗಿಯಾಗಿದ್ದರು.

ಗ್ರ್ಯಾಮಿ ಅವಾರ್ಡ್ ವಿನ್ನರ್ ರಿಕ್ಕಿ ಕೇಜ್, ಗಾಯಕಿ ಚೈತ್ರಾ ಸೇರಿದಂತೆ ಹೆಸರಾಂತ ಕಲಾವಿದರು ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಸ್ಯಾಂಡಲ್ ವುಡ್ ಗೆ 90 ವರ್ಷ; 30 ಕನ್ನಡ ಚಿತ್ರಗಳ ಪ್ರದರ್ಶನ

ಮಾರ್ಚ್ 1 ರಿಂದ ಮಾರ್ಚ್ 7ರ ವರೆಗೆ ಏಳು ದಿನಗಳ ಕಾಲ ಈ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದೇಶ ವಿದೇಶಗಳಲ್ಲಿ ಮನ್ನಣೆ ಪಡೆದಿದ್ದು, ಇದರಲ್ಲಿ 50 ರಾಷ್ಟ್ರಗಳ ಸುಮಾರು 180 ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮ
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com