ಅದಿತಿ ಪ್ರಭುದೇವ
ಅದಿತಿ ಪ್ರಭುದೇವ

ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ ‘ಅಮ್ಮ’; 2024ಕ್ಕೆ ನಾನು ಅಮ್ಮ: ಅದಿತಿ ಪ್ರಭುದೇವ

ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ "ಅಮ್ಮ" ಎಂದು ನಟಿ ಅದಿತಿ ಪ್ರಭುದೇವ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Published on

ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ "ಅಮ್ಮ" ಎಂದು ನಟಿ ಅದಿತಿ ಪ್ರಭುದೇವ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಾವು ತಾಯಿಯಾಗುತ್ತಿರುವ ವಿಷಯವನ್ನು ಅದಿತಿ ಪ್ರಭುದೇವ ಇನ್ ಸ್ಟಾಗ್ರಾಂ ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ.  ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ "ಅಮ್ಮ" . . .  ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ "ಅಮ್ಮ" . . .  2024 ಕ್ಕೆ ನಾನು " ಅಮ್ಮ"  ಎಂದು ತಾವು ಗರ್ಭಿಣಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಉದ್ಯಮಿ ಯಶಸ್‌ ಜೊತೆಗೆ ಅದಿತಿ ಅವರ ಮದುವೆ 2022ರ ನವೆಂಬರ್‌ನಲ್ಲಿ ನಡೆದಿತ್ತು. ದಾವಣಗೆರೆಯ ಅದಿತಿ ಕಿರುತೆರೆಯಿಂದ ‘ಧೈರ್ಯಂ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಟ್ಟವರು.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com