'ಅನ್ನಪೂರ್ಣಿ' ಚಿತ್ರದಲ್ಲಿ ಶ್ರೀರಾಮ, ಹಿಂದೂ ಧರ್ಮಕ್ಕೆ ಧಕ್ಕೆ ಆರೋಪ: ನಟಿ ನಯನತಾರಾ ಕ್ಷಮೆಯಾಚನೆ!

ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ವಿವಾದವೇರ್ಪಟ್ಟಿತ್ತು. ಈ ಕುರಿತು ನಟಿ ನಯನತಾರಾ ಮೌನ ಮುರಿದಿದ್ದು, ಕ್ಷಮೆಯಾಚಿಸಿದ್ದಾರೆ. 
ಅನ್ನಪೂರ್ಣಿಯಲ್ಲಿ ನಯನತಾರಾ
ಅನ್ನಪೂರ್ಣಿಯಲ್ಲಿ ನಯನತಾರಾ

ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ವಿವಾದವೇರ್ಪಟ್ಟಿತ್ತು. ಈ ಕುರಿತು ನಟಿ ನಯನತಾರಾ ಮೌನ ಮುರಿದಿದ್ದು, ಕ್ಷಮೆಯಾಚಿಸಿದ್ದಾರೆ. 

ಈ ಕುರಿತು ಇನ್ ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿರುವ ಅವರು, ನಾನು ಸೇರಿದಂತೆ ಅನ್ನಪೂರ್ಣಿ ಚಿತ್ರತಂಡದವರು ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಉದ್ದೇಶ ಹೊಂದಿಲ್ಲ. ಸಕಾರಾತ್ಮಕ ಸಂದೇಶ ಹಂಚಿಕೊಳ್ಳುವ ಪ್ರಯತ್ನದಲ್ಲಿ ಅಜಾಗರೂಕತೆಯಿಂದ ನೋವುಂಟು ಮಾಡಿರಬಹುದು.ಈ ಹಿಂದೆ ಚಿತ್ರಮಂದಿರಗಳಲ್ಲಿ ಸೆನ್ಸಾರ್ ಗೆ ಒಳಪಟ್ಟಿದ್ದ ಸಿನಿಮಾವನ್ನು ಒಟಿಟಿ ವೇದಿಕೆಯಿಂದ ತೆಗೆದುಹಾಕುವುದನ್ನು ನಾನು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ. 

ದೇವರನ್ನು ಸಂಪೂರ್ಣವಾಗಿ ನಂಬುತ್ತೇನೆ. ದೇಶಾದ್ಯಂತ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದೇನೆ. ಯಾರ ಭಾವನೆಗಳಿಗಾದರೂ ನೋವುಂಟು ಮಾಡಿದ್ದರೆ ಕ್ಷಮೆಯಾಚಿಸುವುದಾಗಿ ಅವರು ಬರೆದುಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com