ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ನಾಗಭೂಷಣ್

ಟಗರು ಪಲ್ಯ, ಕೌಸಲ್ಯಾ ಸುಪ್ರಜಾ ರಾಮ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಗಳಿಸಿರುವ ನಾಗಭೂಷಣ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಟ ನಾಗಭೂಷಣ್ ಮದುವೆ
ನಟ ನಾಗಭೂಷಣ್ ಮದುವೆ

ಬೆಳಗಾವಿ: ಟಗರು ಪಲ್ಯ, ಕೌಸಲ್ಯಾ ಸುಪ್ರಜಾ ರಾಮ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಗಳಿಸಿರುವ ನಾಗಭೂಷಣ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ, ಕಲಾವಿದೆ ಪೂಜಾ ಪ್ರಕಾಶ್ ಜೊತೆ ಇಂದು ಭಾನುವಾರ ಬೆಳಗಾವಿಯಲ್ಲಿ ಮದುವೆ ಆಗಿದ್ದಾರೆ. ಕಾರ್ಯಕ್ರಮದಲ್ಲಿ ಡಾಲಿ ಧನಂಜಯ್, ವಾಸುಕಿ ವೈಭವ್, ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ಹಲವು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. 

ಮದುವೆಯಲ್ಲಿ ಗೆಳೆಯ ನಾಗಭೂಷಣ್ ಅವರಿಗಾಗಿಯೇ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ ಸೊಗಸಾದ ಗೀತೆಗಳನ್ನು ಹಾಡಿದ್ದಾರೆ. ಜೊತೆಗೆ ಹೊಸ ಜೀವನಕ್ಕೆ ವಾಸುಕಿ ದಂಪತಿ ಸಮೇತ ಶುಭ ಹಾರೈಸಿದ್ದಾರೆ.

ಟಗರು ಪಲ್ಯ ಸೇರಿದಂತೆ ಅನೇಕ ಚಿತ್ರಗಳಿಗೆ ನಾಯಕನಾಗಿ ನಟಿಸಿರುವ ನಾಗಭೂಷಣ್, ಕೆಲವು ಚಿತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ಇತ್ತೀಚೆಗಷ್ಟೇ ಇವರ ಹೊಸ ಸಿನಿಮಾ ಘೋಷಣೆಯಾಗಿದ್ದು, ಸಿನಿಮಾವನ್ನು ಡಾಲಿ ಧನಂಜಯ್ ಅವರೇ ನಿರ್ಮಾಣ ಮಾಡುತ್ತಿರುವುದು ವಿಶೇಷ.

ನಾಗಭೂಷಣ್ ಮದುವೆ ಆಗಿರುವ ಪೂಜಾ ಪ್ರಕಾಶ್ ಚಿತ್ರಕಲೆ ಮತ್ತು ಗ್ರಾಫಿಕ್ಸ್ ಡಿಸೈನ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಫೆಬ್ರವರಿ 2 ರಂದು ಮೈಸೂರಿನಲ್ಲಿ ಆರತಕ್ಷತೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com