
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಆಗಿ ಕಾರ್ತಿಕ್ ಮಹೇಶ್ ಹೊರಹೊಮ್ಮಿದ್ದು, ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಈ ವಿನ್ನರ್ ಪಟ್ಟಕ್ಕಾಗಿ ಸಾಕಷ್ಟು ಸ್ಪರ್ಧಿಗಳು ಹೋರಾಟ ನಡೆಸಿದ್ದರು. ಅದರಲ್ಲೂ ಸಂಗೀತಾ ಶೃಂಗೇರಿ, ವಿನಯ್ ಗೌಡ ಮತ್ತು ಡ್ರೋನ್ ಪ್ರತಾಪ್ ಅವರು ಬಿಗ್ಬಾಸ್ ಸೀಸನ್ ವಿನ್ನರ್ ಪಟ್ಟಕ್ಕಾಗಿ ಸಾಕಷ್ಟು ಟಾಸ್ಕ್ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಸದ್ಯ ಈ ಇಬ್ಬರಲ್ಲಿ ಬಿಗ್ಬಾಸ್ ವಿನ್ನರ್ ಪಟ್ಟಕ್ಕಾಗಿ ದೊಡ್ಡ ಫೈಟ್ ನಡೆದಿತ್ತು.
ಅಂತಿಮ ಮೂರರ ಸುತ್ತಿನಲ್ಲಿ ಸಂಗೀತ ಶೃಂಗೇರಿ ಅವರು ಎರಡನೇ ರನ್ನರ್ ಅಪ್ ಆಗಿ ಹೊರಬಂದಿದ್ದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋಣ್ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್ ಕೈ ಇತ್ತು. ಅದರಲ್ಲಿ ಸುದೀಪ್ ಅವರು ಕಾರ್ತಿಕ್ ಅವರ ಕೈಯನ್ನು ಎತ್ತಿ ಹಿಡಿದರು. ಅಂದರೆ ಡ್ರೋಣ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ಹತ್ತು ಲಕ್ಷ ರೂಪಾಯಿಗಳ ಬಹುಮಾನ ಪಡೆದುಕೊಂಡಿದ್ದಾರೆ.
ಕೊನೆಯ ಕ್ಷಣದಲ್ಲಿ ಕೈ ಹಿಡಿದ ಅದೃಷ್ಟ
ಕೊನೆಯ ಕ್ಷಣದಲ್ಲಿ ಬಿಗ್ಬಾಸ್ ಮನೆಗೆ ಬರಲು ತೆಗೆದುಕೊಂಡ ನಿರ್ಣಯ ಕಾರ್ತಿಕ್ ಅವರ ಕೈಹಿಡಿದಿದೆ. ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಅವರಿಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಸಹ ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.
ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್ಬಾಸ್ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್ಬಾಸ್ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು.
Advertisement