'ಅಶ್ವಿನಿ ನಕ್ಷತ್ರ' ಖ್ಯಾತಿಯ ಮಯೂರಿ ಮತ್ತೆ ಕಿರುತೆರೆಗೆ ವಾಪಸ್

ಒಂಬತ್ತು ವರ್ಷಗಳ ಅಂತರದ ನಂತರ ಮಯೂರಿ ನನ್ನ ದೇವ್ರು ಎಂಬ ಧಾರಾವಾಹಿಯ ಮೂಲಕ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ.
ಮಯೂರಿ ಕ್ಯಾತರಿ
ಮಯೂರಿ ಕ್ಯಾತರಿ
Updated on

ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಇಡೀ ರಾಜ್ಯದ ಜನತೆಯ ಮನೆಗೆದ್ದು, ಸ್ಯಾಂಡಲ್ ವುಡ್'ಗೂ ನಟಿಯಾಗಿ ಪಾದಾರ್ಪಣೆ ಮಾಡಿ ಮಿಂಚಿದ್ದ ನಟಿ ಮಯೂರಿ ಅವರು, ಇದೀಗ ಮತ್ತೆ ಕಿರುತೆರೆಗೆ ಮರಳು ಸಜ್ಜಾಗಿದ್ದಾರೆ.

ಒಂಬತ್ತು ವರ್ಷಗಳ ಅಂತರದ ನಂತರ ಮಯೂರಿ ನನ್ನ ದೇವ್ರು ಎಂಬ ಧಾರಾವಾಹಿಯ ಮೂಲಕ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ.

ಧಾರಾವಾಹಿಯಲ್ಲಿ ಮಯೂರಿ ಅವರು ಸಣ್ಣ ಊರಿನ ಬಡ ನರ್ಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿಯೇ ಮಯೂರಿ. ಜನಾನುರಾಗಿ ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಂಬಲಿಸುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ.

ತಾನು ಆರಾಧಿಸುವ ಸಚ್ಚಿದಾನಂದ ಅವರ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲ.

ಮಯೂರಿ ಕ್ಯಾತರಿ
ಹೆಚ್ಚೆಚ್ಚು ಸಂಖ್ಯೆ ಸಿನಿಮಾಗಳಲ್ಲಿ ನಟಿಸಲು ನನಗೆ ಆತುರವಿಲ್ಲ, ಗಮನಾರ್ಹ ಪಾತ್ರ ಮುಖ್ಯ: ಮಯೂರಿ ನಟರಾಜ್

ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿರುವ ಅವಿನಾಶ್ ದಿವಾಕರ್ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಎನ್ನುವುದು ಮತ್ತೊಂದು ವಿಶೇಷವಾಗಿದೆ.

ಇವರೊಟ್ಟಿಗೆ ಯುಕ್ತಾ ಮಲ್ನಾಡ್, ಸ್ವಾತಿ, ವಿ.ಮನೋಹರ್, ರೇಖಾದಾಸ್, ನಿಶ್ಚಿತಾ ಗೌಡ, ಮಾಲತಿ ಸುಧೀರ್, ಯಮುನಾ ಶ್ರೀನಿಧಿ, ರವಿ ಬ್ರಹ್ಮ, ಅಭಿಷೇಕ್ ಶ್ರೀಕಾಂತ್ ಹೀಗೆ 'ನನ್ನ ದೇವ್ರು' ತಾರಾಗಣದಲ್ಲಿ ಜನಪ್ರಿಯ ನಟ ನಟಿಯರಿದ್ದಾರೆ.

ಈ ಮೊದಲು 'ಒಲವಿನ ನಿಲ್ದಾಣ' ಧಾರಾವಾಹಿಯನ್ನು ನಿರ್ಮಿಸಿದ್ದ ಶ್ರುತಿ ನಾಯ್ಡು, ನನ್ನ ದೇವ್ರು ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ. ಬೆಳ್ಳಿ ತೆರೆಯ ಮೇಲೆ ಖಳನಟನಾಗಿ ಗಮನ ಸೆಳೆದಿರುವ ರಮೇಶ್ ಇಂದಿರಾ ನನ್ನ ದೇವ್ರು ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.

ನಟಿ ಮಯೂರಿಯವರು ಕೃಷ್ಣ ಲೀಲಾ, ಇಷ್ಟಕಾಮ್ಯ, ನಟರಾಜ ಸರ್ವೀಸ್, ಕರಿಯಾ 2, ರುಸ್ತುಂ, ಮತ್ತು ಪೊಗರು ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದು, ವಿವಾಹ, ಮಗುವಿನ ಬಳಿಕ ಬ್ರೇಕ್ ತೆಗೆದುಕೊಂಡು, ಇದೀಗ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com