'ಭೈರವನ ಕೊನೆ ಪಾಠ'ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್

ಹೇಮಂತ್-ಶಿವಣ್ಣನ ಕಾಂಬಿನೇಶನ್​​ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ 'ಭೈರವನ ಕೊನೆ ಪಾಠ' ಎಂಬ ಕುತೂಹಲಕಾರಿ ಶೀರ್ಷಿಕೆ ಇಡಲಾಗಿದೆ.
ವೈಶಾಖ್ ಜೆ ಗೌಡ ಹಾಗೂ ಹೇಮಂತ್‌ ರಾವ್‌ ಜೊತೆಗೆ ಶಿವರಾಜ್ ಕುಮಾರ್.
ವೈಶಾಖ್ ಜೆ ಗೌಡ ಹಾಗೂ ಹೇಮಂತ್‌ ರಾವ್‌ ಜೊತೆಗೆ ಶಿವರಾಜ್ ಕುಮಾರ್.
Updated on

ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿ, ಮತ್ತು ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ ಮತ್ತು ಸೈಡ್‌ ಬಿ ಮೂಲಕ ಪ್ಯಾನ್‌ ಇಂಡಿಯಾ ಗಮನ ಸೆಳೆದ ನಿರ್ದೇಶಕ ಹೇಮಂತ್‌ ರಾವ್‌ ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್‌ ಅವರ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಲು ಮುಂದಾಗಿದ್ದಾರೆ.

ಹೇಮಂತ್-ಶಿವಣ್ಣನ ಕಾಂಬಿನೇಶನ್​​ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ 'ಭೈರವನ ಕೊನೆ ಪಾಠ' ಎಂಬ ಕುತೂಹಲಕಾರಿ ಶೀರ್ಷಿಕೆ ಇಡಲಾಗಿದೆ.

ನಿರ್ದೇಶಕ ಹೇಮಂತ್ ಎಂ ರಾವ್ ಅವರ ಸಿನಿಮಾಗಳ ಶೀರ್ಷಿಕೆಗಳು ಯಾವಾಗಲೂ ವಿಶಿಷ್ಟವಾಗಿರುತ್ತವೆ. ಈ ಬಗ್ಗೆ ಪ್ರಶ್ನಿಸಿದಾಗ, ನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಈ ಹಿಂದೆ ಕನ್ನಡ ಸಿನಿಮಾಗಳ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು, ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿ, ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಶೀರ್ಷಿಕೆಗಳು ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರವಾದವು. 'ಭೈರವನ ಕೊನೆ ಪಾಠ' ಕೂಡಾ ಆ ಸಾಲಿಗೆ ಸೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಸಿನಿ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು. ಅದರಲ್ಲೂ ನಾನು ಬಹಳ ಇಷ್ಟಪಡುವ ಶಿವಣ್ಣ ಅವರ ಸಿನಿಮಾ ಶೀರ್ಷಿಕೆಗಳ ಸೌಂದರ್ಯವನ್ನು ಸದಾ ಕಾಲ ನೆನಪಿರುವಂತೆ ಮಾಡುವುದು ನನ್ನ ಬಯಕೆ. ಈ ಚಿತ್ರದಲ್ಲಿ ಭೈರವನೇ ಕೇಂದ್ರ ಪಾತ್ರವಾಗಿದ್ದು, ನಮ್ಮ ಶೀರ್ಷಿಕೆ ಅಚ್ಚುಕಟ್ಟಾಗಿ ಹೊಂದುತ್ತದೆ. ಅವನು ಮಾಡುವ ಪಾಠ ಯಾವುದು? ಅದನ್ನು ಕೊನೆ ಪಾಠ ಎಂದು ಹೇಳಿರುವುದೇಕೆ? ಎನ್ನುವುದೇ ಸಿನಿಮಾದ ಮುಖ್ಯ ತಿರುಳು. ನಮ್ಮ ಶೀರ್ಷಿಕೆ ವೀಕ್ಷಕರಲ್ಲಿ ಈ ಪ್ರಶ್ನೆಗಳನ್ನು ಯಶಸ್ವಿಯಾಗಿ ಹುಟ್ಟುಹಾಕುತ್ತವೆ ಎಂಬುದು ನಮ್ಮ ನಂಬಿಕೆ ಎಂದು ವಿವರಿಸಿದರು.

ವೈಶಾಖ್ ಜೆ ಗೌಡ ಹಾಗೂ ಹೇಮಂತ್‌ ರಾವ್‌ ಜೊತೆಗೆ ಶಿವರಾಜ್ ಕುಮಾರ್.
'ಎಲ್ಲಾ ಹಣೆಬರಹ.. ನಾವೇನು ಮಾಡೋಕ್ಕಾಗಲ್ಲ…': ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ವೈಶಾಖ್ ಜೆ ಗೌಡ ನಿರ್ಮಾಣದ ಚೊಚ್ಚಲ ಚಿತ್ರವಾಗಿದ್ದು, ಶೀರ್ಷಿಕೆ ಬಗ್ಗೆ ಈಗಾಗಲೇ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಈ ಶೀರ್ಷಿಕೆಯನ್ನು ಮೊದಲ ಬಾರಿ ಕೇಳಿದಾಗ ನಾನೆಷ್ಟು ಉತ್ಸಾಹಗೊಂಡಿದ್ದೆನೋ ಅದೇ ಉತ್ಸಾಹ ಜನರಲ್ಲೂ ಕಂಡುಬರುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದೊಂದು ವಿಭಿನ್ನ ಹಾಗೂ ವಿಶಿಷ್ಟ ಚಿತ್ರವಾಗಿ ಮೂಡಿಬರಲಿದ್ದು, ಮುಂದಿನ ತಲೆಮಾರುಗಳವರೆಗೆ ತನ್ನ ಜನಪ್ರಿಯತೆ ಉಳಿಸಿಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಿನಿಮಾದಲ್ಲಿ ಬಳಸಲಾಗಿರುವ ಬಾಣದ ಗುರುತಿನ ಬಗ್ಗೆ ತೂರಿಬಂದ ಪ್ರಶ್ನೆಗಳಿಗೆ ಸದ್ಯದಲ್ಲೇ ಬಿಡುಗಡೆಯಾಗಲಿರುವ ಫಸ್ಟ್ ಲುಕ್ ಪೋಸ್ಟರ್​​ನಲ್ಲಿ ಉತ್ತರ ಸಿಗಲಿದೆ ಎಂದರು.

ವೈಶಾಖ್ ಜೆ ಗೌಡ ಅವರ ವಿಜೆಎಫ್ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದ್ದು, ಜುಲೈ.12ರಂದು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಅಥವಾ ಅದಕ್ಕೂ ಮೊದಲು 'ಭೈರವನ ಕೊನೆ ಪಾಠ' ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com