'ಭೈರತಿ ರಣಗಲ್' ಆಡಿಯೋ ಹಕ್ಕು ಭಾರೀ ಬೆಲೆಗೆ ಆನಂದ್ ಆಡಿಯೋ ಪಾಲು!

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಭೈರತಿ ರಣಗಲ್ ಇತ್ತೀಚೆಗೆ ಶೂಟಿಂಗ್ ಪೂರ್ಣಗೊಳಿಸಿದೆ. ನರ್ತನ್ ನಿರ್ದೇಶನದ ಈ ಚಿತ್ರವು 2017 ರ ಚಲನಚಿತ್ರ ಮಫ್ತಿ ಫ್ರೀಕ್ವೆಲ್ ಆಗಿದೆ.
ಭೈರತಿ ರಣಗಲ್ ಸಿನಿಮಾ ಸ್ಟಿಲ್
ಭೈರತಿ ರಣಗಲ್ ಸಿನಿಮಾ ಸ್ಟಿಲ್

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಭೈರತಿ ರಣಗಲ್ ಇತ್ತೀಚೆಗೆ ಶೂಟಿಂಗ್ ಪೂರ್ಣಗೊಳಿಸಿದೆ. ನರ್ತನ್ ನಿರ್ದೇಶನದ ಈ ಚಿತ್ರವು 2017 ರ ಚಲನಚಿತ್ರ ಮಫ್ತಿ ಫ್ರೀಕ್ವೆಲ್ ಆಗಿದೆ. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ಈ ಸಿನಿಮಾ ನಿರ್ಮಿಸಿದ್ದಾರೆ.

ಆರಂಭದಲ್ಲಿ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ ನಿರ್ದೇಶಕರು ಸಿನಿಮಾ ಬಿಡುಗಡೆಯನ್ನು ಮುಂದೂಡಲು ನಿರ್ಧರಿಸಿದ್ದಾರೆ. ಹೊಸ ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸಬೇಕಾಗಿದೆ.

ಭೈರತಿ ರಣಗಲ್ ಪಾತ್ರದಲ್ಲಿ ಶಿವರಾಜಕುಮಾರ್ ನಟಿಸಿರುವ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ಅವರ ಪಾತ್ರದ ವಿವರಗಳನ್ನು ಇಲ್ಲಿಯವರೆಗೆ ಮುಚ್ಚಿಡಲಾಗಿದೆ. ಆದರೆ, ಭೈರತಿ ರಣಗಲ್ ನಲ್ಲಿ ಸಪ್ತ ಸಾಗರದಾಚೆ ಎಲ್ಲೋ ನಟ ಡಾಕ್ಟರ್ ಪಾತ್ರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದಂತೆ ಅವರ ಪಾತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಭೈರತಿ ರಣಗಲ್ ಸಿನಿಮಾ ಸ್ಟಿಲ್
ಶಿವರಾಜ್ ಕುಮಾರ್ ಬೈರತಿ ರಣಗಲ್ ಚಿತ್ರಕ್ಕೆ 'ರವಿ ಬಸ್ರೂರು' ಸಂಗೀತ

ಏತನ್ಮಧ್ಯೆ, ಭೈರತಿ ರಣಗಲ್ ಚಿತ್ರದ ಆಡಿಯೊ ಹಕ್ಕುಗಳನ್ನು ಆನಂದ್ ಆಡಿಯೊ ಗಣನೀಯ ಬೆಲೆಗೆ ಪಡೆದುಕೊಂಡಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಚಿತ್ರಕ್ಕೆ ಮೂರು ಹಾಡುಗಳನ್ನು ರಚಿಸಿದ್ದಾರೆ. ಅಂತಿಮ ಬಿಡುಗಡೆ ದಿನಾಂಕ ಸೇರಿದಂತೆ ಹೆಚ್ಚಿನ ಅಪ್ ಡೇಟ್ ಗಳನ್ನು ಜುಲೈ 12 ರಂದು ಶಿವರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಬಹು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆಯಾಗಲಿರುವ ಈ ಚಿತ್ರವು ಸೆಪ್ಟೆಂಬರ್ ಮೂರನೇ ವಾರದಲ್ಲಿ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಬಹುದು ಎಂದು ಹೇಳಲಾಗಿದೆ.

ಭೈರತಿ ರಣಗಲ್‌ನಲ್ಲಿ ಅವಿನಾಶ್, ದೇವರಾಜ್, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ, ಮಧು ಗುರುಸ್ವಾಮಿ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹವಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com