ಉಷಾ ಉತ್ತುಪ್ ಮತ್ತು ಜಾನಿ ಚಾಕೋ ಉತ್ತುಪ್
ಸಿನಿಮಾ ಸುದ್ದಿ
ಪಾಪ್ ಗಾಯಕಿ ಉಷಾ ಉತ್ತುಪ್ ಪತಿ ಹೃದಯಾಘಾತದಿಂದ ನಿಧನ
ಭಾರತೀಯ ಪಾಪ್ ಐಕಾನ್, ಬಹು ಭಾಷಾ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೋ ಉತ್ತುಪ್ ಸೋಮವಾರ ಹೃದಯಾಘಾತದಿಂದ ಕೋಲ್ಕತ್ತಾದಲ್ಲಿ ನಿಧನರಾದರು.
ಕೋಲ್ಕೋತಾ: ಭಾರತೀಯ ಪಾಪ್ ಐಕಾನ್, ಬಹು ಭಾಷಾ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೋ ಉತ್ತುಪ್ ಸೋಮವಾರ ಹೃದಯಾಘಾತದಿಂದ ಕೋಲ್ಕತ್ತಾದಲ್ಲಿ ನಿಧನರಾದರು.
ಅವರಿಗೆ 78 ವರ್ಷ ವಯಸ್ಸಾಗಿತ್ತು. ಜಾನಿ ಅವರು ಪತ್ನಿ ಉಷಾ ಉತುಪ್, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ತಮ್ಮ ನಿವಾಸದಲ್ಲಿ ಟಿವಿ ನೋಡುವಾಗ ಸ್ಥಳದಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಜಾನಿ ಅವರು ಚಹಾ ತೋಟವನ್ನು ಹೊಂದಿದ್ದು ಈಶಾನ್ಯ ರಾಜ್ಯಗಳಲ್ಲಿ ಚಹಾ ಉತ್ಪನ್ನಗಳ ವ್ಯವಹಾರ ನಡೆಸುತ್ತಿದ್ದರು. ಉಷಾ ಉತುಪ್ ಅವರಿಗೆ ಜಾನಿ ಎರಡನೇ ಪತಿಯಾಗಿದ್ದರು. 80ರ ದಶಕದಲ್ಲಿ ಇವರು ಮದುವೆಯಾಗಿದ್ದರು. ಈ ವರ್ಷದ ಆರಂಭದಲ್ಲಿ, ಸಂಗೀತ ಉದ್ಯಮ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಉಷಾ ಉತ್ತುಪ್ ಅವರಿಗೆ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣ ನೀಡಿ ಗೌರವಿಸಲಾಯಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ