
ಬೆಂಗಳೂರು: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮ್ಯಾಕ್ಸ್ ಚಿತ್ರತಂಡ ಸಿಹಿಸುದ್ದಿ ನೀಡಿದ್ದು ಇದೇ ಜುಲೈ 16ರಂದು ಚಿತ್ರದ ಕುರಿತು ದೊಡ್ಡ ಅಪ್ ಡೇಟ್ ನೀಡಲು ಸಿದ್ಧವಾಗಿದೆ.
ಹೌದು.. ಸ್ಯಾಂಡಲ್‌ವುಡ್ ನಟ, ಅಭಿನಯ ಚಕ್ರವರ್ತಿ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ (Max) ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಭರದಿಂದ ನಡೆಯುತ್ತಿವೆ.
ಇದರ ನಡುವೆ ‘ಮ್ಯಾಕ್ಸ್’ ಸಿನಿಮಾದ ಬಗ್ಗೆ ಏನು ಅಪ್‌ಡೇಟ್ ಸಿಗದೇ ಕಾಯುತ್ತಿದ್ದ ಫ್ಯಾನ್ಸ್‌ಗೆ ಈಗ ಗುಡ್ ನ್ಯೂಸ್ ಸಿಕ್ಕಿದ್ದು, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಜುಲೈ 16ರಂದು ಮಧ್ಯಾಹ್ನ 12:34ಕ್ಕೆ ಬಿಗ್ ಅಪ್‌ಡೇಟ್ ಸಿಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳುತ್ತಿದ್ದು, ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಬಹುಭಾಷೆಗಳಲ್ಲಿ ಮ್ಯಾಕ್ಸ್ ಸಿನಿಮಾ ರಿಲೀಸ್ ಆಗಲಿದೆ.
ಅಂದಹಾಗೆ, 2022ರಲ್ಲಿ ತೆರೆಕಂಡ `ವಿಕ್ರಾಂತ್ ರೋಣ ಚಿತ್ರದ ನಂತರ ಸುದೀಪ್ ಗ್ಯಾಪ್ ತೆಗೆದುಕೊಂಡಿದ್ದರು. ಬಿಗ್ ಬಾಸ್ ಶೋ ಸೇರಿದಂತೆ ಇತರೆ ಕೆಲಸಗಳಲ್ಲಿ ಬ್ಯುಸಿಯಾದರು.
Advertisement