
ಕನ್ನಡ ನಟ ಯಶ್ ತಮ್ಮ ಮುಂದಿನ ಟಾಕ್ಸಿಕ್ ಮತ್ತು ರಾಮಾಯಣ ಚಿತ್ರಕ್ಕಾಗಿ ಭರ್ಬರಿ ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಅವರು ಮುಂಬೈನಲ್ಲಿ ಕಾಣಿಸಿಕೊಂಡಿದ್ದು ಅವರ ಹೊಸ ಹೇರ್ ಸ್ಟೈಲ್ ಇದೀಗ ಅಭಿಮಾನಿಗಳನ್ನು ಸೆಳೆಯುತ್ತಿದೆ.
ಹೌದು, ಭಾರತದ ಶ್ರೀಮಂತ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪತ್ನಿ ರಾಧಿಕಾ ಪಂಡಿತ್ ಜೊತೆ ಮುಂಬೈಗೆ ಆಗಮಿಸಿದ್ದಾರೆ. ಯಶ್ ನಟನೆಯ ಕೆಜಿಎಫ್ 2 ಬಾಕ್ಸ್ ಆಫೀಸ್ ನಲ್ಲಿ ದಾಖಲೆಯ ಗಳಿಗೆ ಮಾಡಿದ ಒಂದೂವರೆ ವರ್ಷದ ಬಳಿಕ ಟಾಕ್ಸಿಕ್ ಸಿನಿಮಾವನ್ನು ಘೋಷಣೆ ಮಾಡಿದ್ದರು. ಈ ಚಿತ್ರವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶಿಸುತ್ತಿದ್ದಾರೆ.
ಮತ್ತೊಂದೆಡೆ, ಬಾಲಿವುಡ್ ನಟ ರಣಬೀರ್ ಕಪೂರ್ ನಟನೆಯ ರಾಮಾಯಣ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಯಶ್ ಹೊಸ ಲುಕ್ ಯಾವ ಚಿತ್ರಕ್ಕಾಗಿ ಎಂಬ ಕುತೂಹಲ ಹೆಚ್ಚಿಸಿದೆ.
Advertisement